Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: 10 months training: ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > 10 months training: ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

10 months training: ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Editor Nammajana
Last updated: 23 May 2024 15:53
By Editor Nammajana 2 Min Read
Share
SHARE

Chitradurga news | nammajana.com |23-4-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೆಗುಂಟನೂರು ಹೊಬಳಿಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ (10 months training) ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.23 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ 2024ರ ಜೂನ್ 15 ರಿಂದ 2025ರ ಮಾ.31 ರವರೆಗೆ ಅವಧಿ ಪರಿಷ್ಕರಿಸಲಾಗಿದ್ದು, ರೈತರ ಮಕ್ಕಳಿಗೆ 10 ತಿಂಗಳ (10 months training) ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅಥವಾ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಶಿಬಿರದ ಸ್ಥಳ ಮತ್ತು ಸೌಲಭ್ಯದ ಮಾಹಿತಿ

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ. ತರಬೇತಿಗೆ (10 months training) ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ತರಬೇಕಾದ ದಾಖಲೆಗಳು

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು.

ಇದನ್ನೂ ಓದಿ: Dengue fever: ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂಜ್ವರದ ಚಿಕಿತ್ಸೆಗೆ ಬೇಕಾಗುವ ಪ್ಲೇಟ್‍ಲೆಟ್ಸ್ ಲಭ್ಯ

ಸಾಮ್ಯಾನ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ Deputy Director of Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಜೂನ್.3 ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು.

ಜೂನ್ 06 ರಂದು ಬೆಳಿಗ್ಗೆ 10.ಗಂಟೆಗೆ ಚಿತ್ರದುರ್ಗ ತೋಟಗಾರಿಗೆ ಉಪ ನಿರ್ದೇಶಕರರ ಕಚೇರಿಯಲ್ಲಿ ಸಂದರ್ಶವನ್ನು ನೆಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:10 months training10 ತಿಂಗಳ ತರಬೇತಿaccommodationChitradurgaChitradurga Newsfacilitiesfor farmers' childrenfree mealshorticulture departmentKannada Newskannada suddiNammajana.comಉಚಿತ ಊಟಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತೋಟಗಾರಿಕೆ ಇಲಾಖೆನಮ್ಮಜನ.ಕಾಂರೈತರ ಮಕ್ಕಳಿಗೆವಸತಿಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dengue fever: ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂಜ್ವರದ ಚಿಕಿತ್ಸೆಗೆ ಬೇಕಾಗುವ ಪ್ಲೇಟ್‍ಲೆಟ್ಸ್ ಲಭ್ಯ
Next Article Arecanut price today: ಮೇ 23ರ ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?