Chitradurga news|nammajana.com|15-5-2025
ನಮ್ಮಜನ ಸಮಾಚಾರ ಚಿತ್ರದುರ್ಗ: ನಾಡ ದೊರೆ ರಾಜಾವೀರ ಮದಕರಿನಾಯಕನ ೨೪೩ನೇ ಪುಣ್ಯಸ್ಮರಣೆಯನ್ನು ಗುರುವಾರ (Madakarinayaka) ನಾಯಕ ಸಮಾಜದಿಂದ ಆಚರಿಸಲಾಯಿತು.
ಮದಕರಿನಾಯಕನ ಪ್ರತಿಮೆಗೆ ಬೃಹಧಾಕಾರವಾದ ಹೂಮಾಲೆ ಅರ್ಪಿಸಿ ನಂತರ ರಾಜಾವೀರಮದಕರಿನಾಯಕ ಫೋಟೋಗೆ ಪುಷ್ಪನಮನ ಸಲ್ಲಿಸಿ ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶ್ರೀರಂಗಪಟ್ಟಣದಲ್ಲಿ ರಾಜಾವೀರ ಮದಕರಿನಾಯಕನ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಯಕ ಸಮಾಜದ ಮುಖಂಡ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ರಾಜನಹಳ್ಳಿಯಲ್ಲಿ ನಮ್ಮ ಮಠವಿದೆ. ಸ್ವಾಮಿಜಿಗಳು ಹೇಳಿದಂತೆ ನಾವುಗಳು ಕೇಳುತ್ತೇವೆ. ಅಮಿತ್‍ಷಾ ಚಿತ್ರದುರ್ಗಕ್ಕೆ ಬಂದಾಗ ಥೀಮ್ ಪಾರ್ಕ್ ನಿರ್ಮಿಸುವುದಾಗಿ ಭರವಸೆ ನೀಡಿದ್ದರೂ ಇದುವರೆವಿಗೂ (Madakarinayaka) ಈಡೇರಿಲ್ಲ. ತಿಮ್ಮಣ್ಣನನಾಯಕ ಕೆರೆ ಸಮೀಪ ತೋಟಗಾರಿಕೆ ಇಲಾಖೆಗೆ ಸೇರಿದ ಸಾಕಷ್ಟು ಜಾಗವಿದೆ. ಅಲ್ಲಿ ಥೀಮ್ ಪಾರ್ಕ್ ನಿರ್ಮಿಸಬೇಕು ಎಂದರು.
ಇದನ್ನೂ ಓದಿ: metro | ನಮ್ಮ ಮೆಟ್ರೋದಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ
ಈ ಸಂದರ್ಭದಲ್ಲಿ ಎಟಿಎಸ್ ತಿಪ್ಪೇಸ್ವಾಮಿ, ನಗರಸಭೆ ಸದಸ್ಯ ವೆಂಕಟೇಶ್, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್ಟಿ ಸೆಲ್ ವಿಭಾಗದ ಅಧ್ಯಕ್ಷ ಮಂಜುನಾಥ್,ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಹೆಚ್.ಅಂಜಿನಪ್ಪ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ, ರತ್ನಮ್ಮ,
ಪ್ರಶಾಂತ್ ಕೂಲಿಕಾರ್, ಯುವ ನ್ಯಾಯವಾದಿ ಅಶೋಕ್‍ಬೆಳಗಟ್ಟ, ಓಬಳೇಶ್ ಮುದ್ದಾಪುರ ಹೊಸಹಟ್ಟಿ, ವಸಂತ್,ಶಿವಪ್ರಸಾದ್, ಸುರೇಶ್, ಇನ್ನು ಅನೇಕರು (Madakarinayaka) ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252