Chitradurga news|nammajana.com|16-05-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಮೇಗಲಹಳ್ಳಿ ಬಳಿ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು (Asraya mane) ಶುಕ್ರವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಚಿತ್ರದುರ್ಗ ನಗರದ ಮೇಗಲಹಳ್ಳಿ ರಿ. ಸರ್ವೆ ನಂ. 22 ರಲ್ಲಿನ 15 ಎಕರೆ 20 ಗುಂಟೆ ಜಮೀನಿನಲ್ಲಿ 1001 ಸಂಖ್ಯೆಯ ಜಿ+2 ಮಾದರಿಯ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ವೇಗ ನೀಡಿ, ಆದಷ್ಟು ಶೀಘ್ರ ಮನೆಗಳ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು (Asraya mane) ಮಾಡಿದರು.

ಇದನ್ನೂ ಓದಿ: Madakarinayaka | ದುರ್ಗದಲ್ಲಿ ಮದಕರಿನಾಯಕರ ಥೀಮ್ ಪಾರ್ಕ್ ಮಾಡಿ
ಈಗಾಗಲೆ 714 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಎ.ಹೆಚ್.ಪಿ ಯೋಜನೆಯಡಿ 2022ನೇ ಸಾಲಿನಲ್ಲಿ ಗುತ್ತಿಗೆಗೆದಾರರಿಗೆ ಮನೆ ನಿರ್ಮಾಣ ಕೆಲಸದ ಆದೇಶ ನೀಡಲಾಗಿರುತ್ತದೆ. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 2026 ರ ಮಾರ್ಚ್ ಅಂತ್ಯದ ಒಳಗಾಗಿ ಎಲ್ಲ 1001 ಮನೆಗಳನ್ನು ಪೂರ್ಣಗೊಳಿಸುವುದಾಗಿ ಇದೇ ವೇಳೆ (Asraya mane) ಗುತ್ತಿಗೆದಾರರು ಭರವಸೆ ನೀಡಿದರು.
ಇದನ್ನೂ ಓದಿ: Drinking water | ಎರಡು ದಿನ ಶಾಂತಿಸಾಗರ ನೀರು ಸರಬರಾಜು ಸ್ಥಗಿತ
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ, ಗುತ್ತಿಗೆದಾರರು, ನಗರಸಭೆ ಸಿಬ್ಬಂದಿಗಳು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252