Chitradurga news|nammajana.com|18-05-2025
ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ರೈಲ್ವೆ ಖಾತೆ ಸಚಿವ (Railway Bridge) ವೊ.ಸೋಮಣ್ಣ ಅವರ ಸಮ್ಮುದಲ್ಲಿ ನಡೆದ ಸಭೆಯಲ್ಲಿ ಚಿತ್ರದುರ್ಗ ನಗರ ಸೇರಿ ಜಿಲ್ಲೆಯ ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ.

ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು. ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ರೈಲ್ವೆ ಸಚಿವ ವಿ. ಸೋಮಣ್ಣ ಅವರು, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ (Railway Bridge) ಬಗೆಹರಿದಿಲ್ಲ.ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು.
ಎಲ್ಲಾ ರೈಲ್ವೆ
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಅಲ್ಲದೆ ಪರಿಹಾರ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ರೈಲ್ವೆ ಇಲಾಖೆ (Railway Bridge) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: Direct train line | ದಾವಣಗೆರೆ-ಚಿತ್ರದುರ್ಗ ತುಮಕೂರು ನೇರ ರೈಲ್ವೆ ಯೋಜನೆ 2027 ಕ್ಕೆ ಪೂರ್ಣ
ಹೊಸದಾಗಿ ನಿರ್ಮಾಣವಾಗುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳಿಗೆ ಭೂಸ್ವಾಧೀನ ಆಗಬೇಕಾಗಿದೆ. ರಾಜ್ಯ (Railway Bridge) ಸರ್ಕಾರಕ್ಕೆ ಭೂಸ್ವಾಧೀನ ಮಾಡುವಂತೆ ಮನವಿ ಮಾಡಲಾಗಿದೆ. ಭೂಸ್ವಾಧೀನಕ್ಕೆ ಹಾಗೂ ಸೇತುವೆಗಳ ಕಾಮಗಾರಿಗೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
