Chitradurga news | nammajana.com | 15-07-2025
ನಮ್ಮಜನ.ಕಾಂ, ಚಳ್ಳಕೆರೆ: ‘ಗೃಹಲಕ್ಷ್ಮಿ, ಗೃಹಜ್ಯೋತಿ,ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆ(Guarantee)ಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ’ ಎಂದು ಶಾಸಕ ಟಿ.ರಘುಮೂರ್ತಿ ಅಭಿ-ಪ್ರಾಯಪಟ್ಟರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆ ಸಂಭ್ರಮಾಚರಣೆ ಕಾರ್ಯಕ್ರ-ಮದಲ್ಲಿ ಮಾತನಾಡಿದರು.
2 ವರ್ಷಗಳಿಂದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಿದ್ದಾರೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಸ್ತ್ರೀಯರಿಗೆ ಸಾಕಷ್ಟು ಅನುಕೂಲವಾಗಿದೆ’ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ(Guarantee) ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವೀರಭದ್ರಯ್ಯ, ಮಹಿಳಾ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷೆ ಗೀತಾಬಾಯಿ, ತಹಶೀಲ್ದಾರ್ ರೇಹಾನ್‌ಪಾಷ, ತಾಲ್ಲೂಕು ಪಂಚಾಯಿತಿ ಇಒ ಎಚ್.ಶಶಿಧರ್, ಪೌರಾಯುಕ್ತ ಜಗರೆಡ್ಡಿ, ಸಾರಿಗೆ ಅಧಿಕಾರಿ ನಿರಂಜನಮೂರ್ತಿ, ನಗರಸಭೆ ಅಧ್ಯಕ್ಷೆ ಶಿಲ್ಪಾ, ಮಂಜುಳಾ ಆರ್. ಪ್ರಸನ್ನಕುಮಾ-ರ್, ಕವಿತಾ ಬೋರಯ್ಯ, ಜೈತುನ್‌ಬಿ, ಸಿ.ಟಿ.ಶ್ರೀನಿವಾಸ್, ಕೃಷ್ಣಮೂರ್ತಿ, ರಂಗಸ್ವಾಮಿ, ಗುಜ್ಜಾರಪ್ಪ, ನಿಜಲಿಂಗಪ್ಪ, ಮಂಜುನಾಥ್, ರುದ್ರಮುನಿ ಇದ್ದರು.
ಇದನ್ನೂ ಓದಿ: KSRTC ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಸಂಭ್ರಮ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252