Chitradurga news | nammajana.com | 15-07-2025
ನಮ್ಮಜನ ನ್ಯೂಸ್, ಕಾಂ, ಹಿರಿಯೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆ ಬಂದಿದ್ದ ಸಚಿವ ಡಿ.ಸುಧಾಕರ್(D.Sudhakar) ಲಕ್ಕವ್ವನಹಳ್ಳಿ ರಸ್ತೆಯ ದುರವಸ್ಥೆಯನ್ನು ಗಮನಿಸಿ ನಾನು ಈ ಸಲ ಚುನಾವಣೆಯಲ್ಲಿ ಗೆದ್ದಾಗ ಈ ರಸ್ತೆಯನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಮಾತು ಕೊಟ್ಟಿದ್ದರು. ಅದರಂತೆ ಸದರಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ನುಡಿದಂತೆ ನಡೆದಿದ್ದಾರೆ ಎಂದು ಸ್ಥಾಯಿ ಸಮಿತಿ ರು ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಸುಂದರ್ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ: KSRTC ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಸಂಭ್ರಮ

ನಗರದ ಲಕ್ಕವ್ವನಹಳ್ಳಿ ರಸ್ತೆಯ ಕಾಮಗಾರಿಯನ್ನು ಸಚಿವ ಡಿ. ಸುಧಾಕರ್ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ, ಲಕ್ಕವ್ವನಹಳ್ಳಿ ರಸ್ತೆಯನ್ನು ನಗರ(D.Sudhakar) ವ್ಯಾಪ್ತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯವರೆಗೂ ಮುಂದುವರೆಸಿ ಅಭಿವೃದ್ಧಿಯ ಮೈಲುಗಲ್ಲು ನೆಟ್ಟಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಈರಲಿಂಗೇಗೌಡ, ಜಿಪಂ ಮಾಜಿ ಸದಸ್ಯ ನಾಗೇಂದ್ರ ನಾಯ್ಕ, ಕೆಡಿಪಿ ಸದಸ್ಯ ಶಿವಕುಮಾರ್, ನಗರಸಭೆ ನಾಮನಿರ್ದೇಶಿತ ಸದಸ್ಯ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜ್ಞಾನೇಶ್, ದರ್ಶನ್, ತಿಮ್ಮರಾಜು ಮುಂತಾದವರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252