Chitradurga news | nammajana.com| 17-07-2025
ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಸುಮಾರು 15 ದಿನಗಳಿಂದ ನಗರಸಭೆ ಆಡಳಿತ ನಗರದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗುವ ಡಬ್ಬಾ ಅಂಗಡಿ(Shops demolished)ಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆಸಿದ್ದು, ಬುಧವಾರವೂ ಸಹ ನಗರದ ಸಾರ್ವಜನಿಕ ಆಸ್ಪತ್ರೆಯ ಕಾಂಪೌಂಡ್‌ಗೆ ಹೊಂದಿಕೊಂಡಿದ್ದ ಅನೇಕ ಗೂಡಂಗಡಿಗಳನ್ನು ತೆರವುಗೊಳಿಸಿದರು.
ಇದನ್ನೂ ಓದಿ: Hostel Admission: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪೌರಾಯುಕ್ತ ಎಚ್.ಜಿ.ಜಗರೆಡ್ಡಿ ನೇತೃತ್ವದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕರಾದ ಮಹಲಿಂಗಪ್ಪ, ಗಣೇಶ್, ರುದ್ರಮುನಿ, ಪರಿಸರ ಇಂಜಿನಿಯರ್ ನರೇಂದ್ರಬಾಬು ಮುಂತಾದವರು ಉಪಸ್ಥಿತರಿದ್ದರು.
ಪೌರಕಾರ್ಮಿಕರು ಗೂಡಂಗಡಿಗಳನ್ನು ನಗರಸಭೆ ಟ್ರ್ಯಾಕ್ಟರ್ ಮೂಲಕ ಹೊರಗೆ ಸಾಗಿಸಿದರು. ನಗರಸಭೆಯ ತೆರವು ಕಾರ್ಯಕ್ರಮವನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಸಾರ್ವಜನಿಕರು(Shops demolished) ಹಾಗೂ ವಾಹನ ಸಂಚಾರಕ್ಕೆ ದಿನನಿತ್ಯ ಉಂಟಾಗುತ್ತಿರುವ ತೊಂದರೆ ನಿವಾರಿಸಲು ಸರ್ಕಾರದ ನಿರ್ದೇಶನದ ಮೇರೆಗೆ ಗೂಡಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ | ವಾಹನಗಳ ಹರಾಜು ಪ್ರಕ್ರಿಯೆಗೆ ಕ್ರಮ
ಈ ಕಾರ್ಯಚರಣೆ ನಿರಂತರವಾಗಿ ಮುಂದುವರೆಯಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252