Chitradurga news | nammajana.com | 27-07-2025
ನಮ್ಮಜನ.ಕಾ, ಚಿತ್ರದುರ್ಗ: ಜಿಲ್ಲೆಯ ವಿವಿದೆಡೆ(UREA) ಸಮೃದ್ಧ ಮಳೆಯಾಗುತ್ತಿದ್ದು, ಕೃಷಿಕರು ತಮ್ಮ ಬೆಳೆಗಳಿಗೆ ಬೇಕಾದ ಯೂರಿಯಾ ರಸಗೊಬ್ಬರ ಪಡೆಯಲು ಬೆಳಿಗ್ಗೆಯಿಂದಲೇ ಎಪಿಎಂಸಿ ಆವರಣ ಸಮೀಪ ಸಾವಿರಾರು ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತು. ಕೃಷಿಕರ ಈ ಸರದಿಯ ಸಾಲುಮುಕ್ಕಾಲು ಕಿ.ಮೀ. ದೂರದವರೆಗೂ ಇದ್ದುದು ಯೂರಿಯಾ ಗೊಬ್ಬರಕ್ಕೆ ಇರುವ ಬೇಡಿಕೆಯನ್ನು ಸೂಚಿಸುವಂತಿತ್ತು.
ಇದನ್ನೂ ಓದಿ: ರಾಜ್ಯ ಮಟ್ಟದ ಟೇಕ್ವಾಂಡೋ ವಿಜೇತರಿಗೆ ಸನ್ಮಾನಿಸಿದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಮನೆಯಲ್ಲಿ ಕೆಲಸ ನಿರ್ವಹಿಸಿ ಸಂಸಾರದ ಬಂಡಿ ಸಾಗಿಸಬೇಕಾದ ಮಹಿಳೆಯರೂ ಅಚ್ಚರಿಯೆಂಬಂತೆ ಸರದಿ ಸಾಲುಗಳಲ್ಲಿ ಅಗತ್ಯ ದಾಖಲೆಗಳನ್ನು ಕೈಯಲ್ಲಿ ಹಿಡಿದುಕೊಂಡು ಕಾಯುತ್ತಿದ್ದುದು ನಮ್ಮ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಿತ್ತು.
ರೈತರು ಲಗ್ಗೆ ಇಟ್ಟಿದ್ದರಿಂದ ಎಪಿಎಂಸಿ ಮಾರುಕಟ್ಟೆಯ ಕಡೆಗೆ ಹೋಗುತ್ತಿದ್ದ ರಸ್ತೆಗಳನ್ನು ಪೊಲೀಸರು ಕೆಲ ಹೊತ್ತು ಬಂದ್ ಮಾಡಿದ್ದರು.
ರೈತರು ರೊಚ್ಚಿಗೆದ್ದು ಆಕ್ರೋಶ(UREA) ವ್ಯಕ್ತಪಡಿಸಬಹುದೆಂದು ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರನ್ನು ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಗೊಬ್ಬರ ಪಡೆದ ನಂತರ ರೈತರು ಎರಡು ಚೀಲ ಯಾವುದಕ್ಕೆ ಸಾಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ದವೂ ಕೆಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಿಜೆಪಿ ಜಿಲ್ಲಾ ಘಟಕದಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ
ರೈತ ಮುಖಂಡ ಆರ್.ಬಿ. ನಿಜಲಿಂಗಪ್ಪ ಮಾತನಾಡಿ, ಜಿಲ್ಲೆಯ ಹಲವೆಡೆವಾರದಿಂದ ಉತ್ತಮ ಮಳೆಯಾಗುತ್ತಿದೆ. ಯೂರಿಯಾ, ಡಿಎಪಿ ಗೊಬ್ಬರವಿಲ್ಲದೆ ಬೇಸಾಯ ಕೈಗೊ ಳ್ಳಲು ಹೇಗೆ ಸಾಧ್ಯ. ಮುಂದೆ ರೈತಾಕ್ರೋಶ ಉಂಟಾದಲ್ಲಿ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.
ಜಿಲ್ಲೆಯ ರೈತರು ಸತತ ಬರಕ್ಕೆ ನಲುಗಿ ಜಾನುವಾರು ಮಾರಿಕೊಂಡುಸಂಕಷ್ಟದಲ್ಲಿದ್ದಾರೆ.ಹೀಗಾಗಿಸರ್ಕಾರದಿ ರೆ.ಹೀಗಾಗಿ ಸರ್ಕಾರದಿಂದ ವಿತರಿಸುವ ಗೊಬ್ಬರವನ್ನೇ ನಂಬಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗೊಬ್ಬರ ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಏಪ್ರಿ ಲ್, ಮೇ ತಿಂಗಳಲ್ಲೇ ಮನವಿ ಸಲ್ಲಿಸಲಾಗಿತ್ತು. ಆದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ನೂರಾರು ರೈತ ಮಹಿಳೆಯರು(UREA) ಗೊಬ್ಬರಕ್ಕಾಗಿ ಕಾಯುವಂತಾಗಿದೆ. ಇದು ಮರುಕಳಿಸಬಾರದು. ಕೂಡಲೇ ಜಿಲ್ಲೆಯ ಗೊಬ್ಬರದ ಎಲ್ಲ ಸೊಸೈಟಿಗಳಿಗೂ ಸಮರ್ಪಕವಾಗಿ ದಾಸ್ತಾನು ಮಾಡಬೇಕು. ನಿಗದಿತ ದರದಲ್ಲೇ ವಿತರಿಸಬೇಕು ಎಂದು ಒತ್ತಾಯಿಸಿದರು.
ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ, ಗೊಬ್ಬರ, ಬೀಜ ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು. ಬೇಜವಾಬ್ದಾರಿ ಕಾರಣಕ್ಕೆ ಜಿಲ್ಲೆಯ ರೈತರು ಬೀದಿಯಲ್ಲಿ ನಿಂತು ಕಾಯುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಭದ್ರಾ ಜಲಾಶಯದ ನೀರಿನ ಮಟ್ಟದ ಒಳಹರಿವು ಭಾರೀ ಏರಿಕೆ
ಎರಡು ಪ್ಯಾಕೆಟ್‌ಗಾಗಿ ಹಗಲೆಲ್ಲ ಕಾಯಬೇಕಿದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಾಚಿಕೆಯಾಗಬೇಕು. ರೈತರು ಕೇಳುವಷ್ಟು ಗೊಬ್ಬರ ವಿತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಖಾಸಗಿಯಾಗಿ(UREA) ಹೆಚ್ಚುವರಿ ದರಕ್ಕೆ ಗೊಬ್ಬರ ಮಾರಾಟ ಮಾಡುತ್ತಿದ್ದು, ಗೋದಾಮಿನಲ್ಲಿ ಗೊಬ್ಬರ ದಾಸ್ತಾನು ಇದ್ದರೂ ಇಲ್ಲವೆಂದು ಹೇಳುತ್ತಿದ್ದಾರೆ. ಇಲಾಖೆ ಅಧಿಕಾರಿ ಗಳು ಕ್ರಮ ಕೈಗೊಳ್ಳುವ ಬದಲು ಮೌನವಹಿಸಿದ್ದಾರೆ ಎಂದು ಚಿಕ್ಕಬಿಗೆರೆ ನಾಗರಾಜ್, ಹೊಳಲ್ಕೆರೆ ಶಿವಕುಮಾರ್ ದೂರಿ ದರು. ಯೂರಿಯಾ ರಸಗೊಬ್ಬರ ಅಭಾವದಿಂದಾಗಿ ರೈತರು ಕಂಗಾಲಾಗಿದ್ದಾರೆ. ಕೃಷಿ ಚಟುವಟಿಕೆ ಕೈಗೊಳ್ಳಲು ಸಾಧ್ಯವಾ ಗುತ್ತಿಲ್ಲ. ಹೀಗಾಗಿ ಗೊಬ್ಬರ, ಬೀಜ, ಔಷಧಿ ದಾಸ್ತಾನು ಸಂಗ್ರಹಕ್ಕೆ ಕ್ರಮವಹಿಸಬೇಕು ಎಂದು ಕೋರಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252