Chitradurga news | nammajana.com | 27-07-2025
ನಮ್ಮಜನ.ಕಾಂ, ಹೊಳಲ್ಕೆರೆ: ಜೀವನದಲ್ಲಿ (achievement) ಏನಾದರೂ ಸಾಧನೆ ಮಾಡಬೇಕಾದರೆ ಬದ್ದತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಹೊರ ಹರಿವು ಹೆಚ್ಚಳ

ಪಟ್ಟಣದ ಸಂವಿಧಾನ ಸೌಧದಲ್ಲಿ ಕುವೆಂಪು ಟ್ರಸ್ಟ್ ಶಿವಗಂಗ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನೋಟ್‍ಬುಕ್, ಇತರೆ ಸಲಕರಣೆಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ. ಟೈಲರಿಂಗ್ ತರಬೇತಿ ಪಡೆದವರಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಳೆದ 24 ವರ್ಷಗಳಿಂದಲೂ(achievement) ಕುವೆಂಪು ಟ್ರಸ್ಟ್ ಮಕ್ಕಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಕಮ್ಮಿ ಸಾಧನೆಯಲ್ಲ. ಜೀವನದಲ್ಲಿ ಜಯ-ಅಪಜಯ, ಟೀಕೆಗಳನ್ನು ಸಮಾನವಾಗಿ ಯಾರು ಸ್ವೀಕರಿಸುತ್ತಾರೋ ಅಂತಹವರಿಂದ ಮಾತ್ರ ಇಂತಹ ಸಮಾಜ ಸೇವೆ ಮಾಡಲು ಸಾಧ್ಯ.
ಇದನ್ನೂ ಓದಿ: ಸಮೃದ್ಧಿ ಮಳೆ, ಬೆಳೆಗಳಿಗೆ ಬೇಕಾದ ಯೂರಿಯಾ ಇಲ್ಲ, ಸರ್ಕಾರದ ವಿರುದ್ದ ರೈತರ ಅಕ್ರೋಶ
ನನ್ನದೊಂದು ಫೌಂಡೇಷನ್ ಇದೆ. ಅದರಲ್ಲಿ ಬರುವ ಆದಾಯದಲ್ಲಿ ಪ್ರತಿ ವರ್ಷವೂ ಶೇ.40 ರಷ್ಟು ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೀಡುತ್ತಿದ್ದೇನೆ. ರಘುಚಂದನ್ ಫೌಂಡೇಶನ್‍ನಿಂದ ರಾಜ್ಯದಲ್ಲಿ 25 ಬಡ ಮಕ್ಕಳು ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವವರು ಯಾವ ಕಾಲೇಜಿನಲ್ಲಿ ಓದುತ್ತಾರೋ ಅಲ್ಲಿ ಓದಿಸುತ್ತೇವೆ.
ಗ್ರಾಮೀಣ ಪ್ರದೇಶದ ಆರು, ಏಳು, ಎಂಟನೆ ಕ್ಲಾಸ್‍ನಲ್ಲಿ ಶೇ.80 ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುವುದು. ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಚಿತ್ರದುರ್ಗದ ಮಕ್ಕಳು ಹೆಚ್ಚಿನ ಪ್ರಯೋಜನ ಪಡೆದುಕೊಂಡಿದ್ದಾರೆ.
ಮುಂದಿನ ವರ್ಷ ಕುವೆಂಪು(achievement) ಟ್ರಸ್ಟ್‍ಗೆ ರಘುಚಂದನ್ ಫೌಂಡೇಶನ್‍ನಿಂದ ಐವತ್ತು ಸಾವಿರ ರೂ.ಗಳನ್ನು ನೀಡುತ್ತೇನೆ. ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಲಿ ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯ ಮಟ್ಟದ ಟೇಕ್ವಾಂಡೋ ವಿಜೇತರಿಗೆ ಸನ್ಮಾನಿಸಿದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ಶಿವಗಂಗ ಕುವೆಂಪು ಟ್ರಸ್ಟ್ ಅಧ್ಯಕ್ಷ ಡಿ.ವಿ.ಪ್ರಕಾಶ್, ಹೊಳಲ್ಕೆರೆ ಬಿಜೆಪಿ. ಮಂಡಲ ಅಧ್ಯಕ್ಷ ವಸಂತಕುಮಾರ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಕಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಎ.ಜಯಪ್ಪ, ಡಾ. ಮಂಜುಳಗೌಡ, ಪ್ರಸನ್ನಕುಮಾರಿ, ರಶ್ಮಿ, ಸತೀಶ್, ಬಸವರಾಜ್, ಚಂದ್ರಪ್ಪ, ಮಂಜುಳ, ಶಿವಮೂರ್ತಿ, ಶಿವಲಿಂಗಪ್ಪ, ವೀರಕೆಂಚಪ್ಪ ಹಾಗೂ ಕುವೆಂಪು ಟ್ರಸ್ಟ್‍ನ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252