Chitradurga news|Nammajana.com|31-7-2025
ನಮ್ಮಜನ.ಕಾಂ, ಚಿತ್ರದುರ್ಗ: ಐತಿಹಾಸಿಕ ಕೋಟೆ ವೀಕ್ಷಣೆಗೆ (Chitradurga Fort) ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.
ಪ್ರವಾಸಿಗರಿಗೆ ಏನೆಲ್ಲ ವ್ಯವಸ್ಥೆ ಇದೆ
ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ (Chitradurga Fort) ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು.
ಪ್ರವಾಸಿಗರಿಗೆ ಅನುಕೂಲ ಮಾಡಲು ಈ ಕೇಂದ್ರ
ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ (Chitradurga Fort) ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದನ್ನೂ ಓದಿ: Today Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ರಾಜಯೋಗ
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, (Chitradurga Fort) ಕೆಆರ್ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252