Chitradurga news|Nammajana.com|2-8-2025
ನಮ್ಮಜನ.ಕಾಂ, ಚಿತ್ರದುರ್ಗ: ಗಂಡು ಮೆಟ್ಟಿದ ನಾಡಿನ ಸಾಹಿತಿ, ಹಿರಿಯ ಪತ್ರಕರ್ತರು, ಸಂಘಟನೆಗಳ ಅನೇಕ ಹೋರಾಟಗಳಲ್ಲಿ ಗುರುತಿಸಿಕೊಂಡು ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿರುವ ಚಳ್ಳಕೆರೆ ಜಡೆಕುಂಟೆ ಮಂಜುನಾಥ್ ಅವರ ʼಕಾಡು ಕಾಯುವ ಮರʼ ಕಥಾ ಸಂಕಲನ ಲೋಕಾರ್ಪಣೆ ಸಮಾರಂಭ ಆಗಸ್ಟ್ 3 ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಹೈಟೆಕ್ ಹಾಲ್ ನಲ್ಲಿ ನೇರವೇರಲಿದೆ.
ಕಾರ್ಯನಿರತ ಪತ್ರಕರ್ತರ ಸಂಘ, ಲಂಕೇಶ್ ವಿಚಾರ ವೇದಿಕೆ, ಅಂಬೇಡ್ಕರ್ ವಿಚಾರ ವೇದಿಕೆ, ಮೈತ್ರಿ ಪುಸ್ತಕ ಮನೆ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹಿರಿಯ ಪತ್ರಕರ್ತರು, ಲೇಖಕರಾದ ಜಿ.ಎನ್.ಮೋಹನ್ ಕೃತಿ ಲೋಕಾರ್ಪಣೆ ಮಾಡಲಿದ್ದು, ಕಾರ್ಯಕ್ರಮವನ್ನು ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ
ಕೃತಿ ಕುರಿತು ಶಿವಮೊಗ್ಗದ ಉಪನ್ಯಾಸಕಿ ಭಾರತೀದೇವಿ ಉಪಾನ್ಯಾಸ ನೀಡಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸುವರು.
ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಅಂತಾರಾಷ್ಟ್ರೀಯ ವ್ಯಂಗ್ಯ ಚಿತ್ರಕಾರ ಬಿ.ಜಿ.ಗುಜ್ಜಾರ್, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಮಾಧ್ಯಮ ಅಕಾಡೆಮಿ ಸದಸ್ಯರು ಹಾಗೂ ವಿಜಯ ಕರ್ನಾಟಕ ವಿಶೇಷ ವರದಿಗಾರರಾದ ಎಂ.ಎನ್.ಅಹೋಬಲಪತಿ, ಕೂಡ್ಲಿಗಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕ ಆರ್.ಮಂಜುನಾಥ್ ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252