Chitradurga News | Nammajana.com | 11-08-2025
ನಮ್ಮಜನ.ಕಾಂ, ಕರ್ನಾಟಕ: 2025-26 ನೇ ಸಾಲಿನ(best teacher award) ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯ ಅನುಸಾರ, ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ https://schooleducation.karnataka.gov.in ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ದಿನಾಂಕ:10.08.2025 ರವರೆಗೆ ನಿಗದಿಪಡಿಸಲಾಗಿದ್ದ ಅಂತಿಮ ದಿನಾಂಕವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ದಿನಾಂಕ: 11.08.2025 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರು: ಎಂ.ಬಿ.ಪಾಟೀಲ್ | ಕೋಟೆ ನಾಡಲ್ಲಿ ಟಿಬೆಟ್ ಬೌದ್ಧ ಗುರು ದಲೈ ಲಾಮಾ ಜನ್ಮದಿನ ಆಚರಣೆ

ಅರ್ಹ ಆಕಾಂಕ್ಷಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಹಾಗೂ ಇಲ್ಲಿಯವರೆಗೆ ಅರ್ಜಿಗಳನ್ನು ಸಲ್ಲಿಸುವ ಕಾರ್ಯದ ಪ್ರಗತಿಯಲ್ಲಿರುವ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ನಿಗದಿತ ಅವಧಿಯೊಳಗೆ ಸದರಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಸದರಿಯವರಿಗೆ ತಿಳಿಸಲು ಉಲ್ಲೇಖಿತ ಸುತ್ತೋಲೆಯ ಅನುಸಾರ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.
