Chitradurga news|Nammajana.com|11-8-2025
ನಮ್ಮಜನ.ಕಾಂ, ಚಿತ್ರದುರ್ಗ: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ “ಮತ ಕಳ್ಳತನ” ನಡೆದಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ ನಂತರ ಕರ್ನಾಟಕದ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ.
ರಾಜಣ್ಣ ಅವರ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾದ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಸೂಚಿಸಿತು. ಸಚಿವರ ರಾಜೀನಾಮೆಯ ಬಗ್ಗೆ ವಿಧಾನಸಭೆಯಲ್ಲಿ ಅಧಿಕೃತ ಹೇಳಿಕೆ ನೀಡಲು ಮುಖ್ಯಮಂತ್ರಿಗೆ ಅವಕಾಶವಿಲ್ಲ. ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ನಾ
ಈ ಹಿಂದೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಲೋಪದೋಷವಾಗಿರುವ ಬಗ್ಗೆ ಕೆ.ಎನ್.ರಾಜಣ್ಣ ಮಾತನಾಡಿದ್ದರು. 2024ರ ಲೋಕಸಭಾ ಚುನಾವಣೆ ನಡೆದಾಗ, ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇತ್ತು. ನಾವೇ ಮತದಾರರ ಪಟ್ಟಿಯ ಬಗ್ಗೆ ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ನಮ್ಮ ತಪ್ಪು ಕೂಡ ಇದೆ. ವೋಟಿಂಗ್ ಲಿಸ್ಟ್ ತಯಾರಾಗಿದ್ದೇ ನಮ್ಮ ಸರ್ಕಾರದ ಅವಧಿಯಲ್ಲಿ. ಮತದಾರರ ಪಟ್ಟಿಯಲ್ಲಿ ಆಕ್ರಮ ನಡೆದಿರೋದು ನಿಜ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಮಹದೇವಪುರ ಅಸೆಂಬ್ಲಿಯಲ್ಲಿ ನಮ್ಮ ಲೋಪ ಕೂಡ ಇದೆ. ಲೋಕಸಭೆ ಚುನಾವಣೆ ವೇಳೆ ನಾವೇ ಅಧಿಕಾರದಲ್ಲಿದ್ದೇವು ಎಂದು ಸಹಕಾರ ಸಚಿವ ಕೆ. ಎನ್.ರಾಜಣ್ಣ ಮಾತನಾಡಿದ್ದರು.
ಇದನ್ನೂ ಓದಿ: Bangalore: ಆ.29 ರಂದು ಬೆಂಗಳೂರು ವಿಭಾಗ ಮಟ್ಟದ ಸಮಾವೇಶ : ರಾಜ್ಯಾಧ್ಯಕ್ಷ ಡಾ.ಎಲ್.ಭೈರಪ್ಪ
ನಾಯಕ ಸಮಾಜಕ್ಕೆ ದೊಡ್ಡ ಹಿನ್ನಡೆ
ಈ ಎಲ್ಲಾ ಬೆಳಣಿಗೆಗಳಲ್ಲಿ ಒಟ್ಟಾರೆ ಕರ್ನಾಟಕ ಸರ್ಕಾರದ ಎರಡನೇ ವಿಕೆಟ್ ಪತನವಾಗಿದೆ. ನಾಯಕ ಸಮಾಜಕ್ಕೆ ಸೇರಿದ ಎರಡನೇ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರ ರಾಜೀನಾಮೆ ಮೂಲಕ ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಏಕೈಕ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಉಳಿದುಕೊಂಡಿದ್ದು ಇಡೀ ಸಮಾಜಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಬಹುದಾಗಿದೆ.
ವಿಧಾನ ಸಭೆ ಚುನಾವಣೆ ಪೂರ್ವದಲ್ಲಿ ಚಿತ್ತದುರ್ಗ ಜಿಲ್ಲಾ ಉಸ್ತುವಾರಿಯಾಗಿದ್ದ ಕೆಎನ್ಆರ್
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಲುವಲ್ಲಿ ಶ್ರಮಸಿದ್ದರು. ಅವರು ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಚುನಾವಣಾ ಉಸ್ತುವಾರಿ ಸಹ ಆಗಿ ಸೇವೆ ಸಲ್ಲಿಸಿದ್ದರು.
