Chitradurga News | Nammajana.com | 11-08-2025
ನಮ್ಮಜನ.ಕಾಂ,ಚಿತ್ರದುರ್ಗ: ಆ.16 ರಂದು(internal reservation) ನಡೆಯುವ ಸಭೆಯಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ದೊಡ್ಡ ಆಂದೋಲನ ನಡೆಸುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಎಚ್ಚರಿಸಿದರು.
ಇದನ್ನೂ ಓದಿ: ಆ.29 ರಂದು ಬೆಂಗಳೂರು ವಿಭಾಗ ಮಟ್ಟದ ಸಮಾವೇಶ : ರಾಜ್ಯಾಧ್ಯಕ್ಷ ಡಾ.ಎಲ್.ಭೈರಪ್ಪ

ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷಗಳು ಕಳೆದಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಠಾನಕ್ಕೆ ತರಲು ವಿಳಂಭ ನೀತಿ ಅನುಸರಿಸುತ್ತಿದ್ದಾರೆ.
ಆ.16 ರಂದು ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಒಳ ಮೀಸಲಾತಿಯನ್ನು ವಿರೋಧಿಸುವವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಭೋವಿ, ಲಂಬಾಣಿ ಸಮಾಜದ ಸ್ವಾಮೀಜಿಗಳು ಒಳ ಮೀಸಲಾತಿಯನ್ನು ವಿರೋಧಿಸಬಾರದು. ಮಾದಿಗ ಉಪ ಜಾತಿಗಳಿಗೆ ಶೇ.6 ರಷ್ಟು ಮೀಸಲಾತಿ ಕೊಡಬೇಕೆಂದು ಒತ್ತಾಯಿಸಿದರು.
ಒಳ ಮೀಸಲಾತಿಗಾಗಿ ಕಳದೆ(internal reservation) 35 ವರ್ಷಗಳಿಂದಲೂ ಹೋರಾಟ ನಡೆಸಿಕೊಂಡು ಬರುತಿದ್ದೇವೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಆಂಧ್ರ, ಕೇರಳ, ಹರಿಯಾಣ, ತಮಿಳುನಾಡಿನಲ್ಲಿ ಈಗಾಗಲೆ ಒಳ ಮೀಸಲಾತಿಯನ್ನು ಜಾರಿಗೆ ತರಲಾಗಿದೆ. ಎಲ್.ಜಿ.ಹಾವನೂರ್, ವೆಂಕಟಸ್ವಾಮಿ, ಸದಾಶಿವ ಹಾಗೂ ನಾಗಮೋಹನ್‍ದಾಸ್ ಆಯೋಗ ಸರ್ಕಾರಕ್ಕೆ ವೈಜ್ಞಾನಿಕ ವರದಿ ನೀಡಿದ್ದರು ಬಲಾಢ್ಯ ಕೋಮಿಗೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದ್ದಾರೆ.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಬಿಜೆಪಿ, ಕಾಂಗ್ರೆಸ್, ದಳ ಎಲ್ಲಾ ಪಕ್ಷಗಳು ನಮ್ಮ ಸಮುದಾಯದ ಮತಗಳನ್ನು ಪಡೆದು ವಂಚಿಸಿಕೊಂಡು ಬರುತ್ತಿವೆ. ಒಳ ಮೀಸಲಾತಿ ಜಾರಿಯಾಗುವತನಕ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಆದರೂ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.
ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೆ ಕುರ್ಚಿ ಖಾಲಿ ಮಾಡಿ ಎನ್ನುವ ಚಳುವಳಿ ನಡೆಸಲು ಸಿದ್ದರಿದ್ದೇವೆಂದರು.
ಕೆಲವು ಮುಖಂಡರುಗಳು ಆಯೋಗ ನಡೆಸಿರುವ ಅಧ್ಯಯನ ಸರಿಯಲ್ಲವೆನ್ನುತ್ತಾ ಒಳ ಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿದ್ದಾರೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕೇವಲ ದಲಿತರಿಗೆ ಸೇರಿದವರಲ್ಲ. ಎಲ್ಲಾ ಶೋಷಿತ ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ ಮಹಾ ಮಾನವತಾವಾದಿ.
ಇಲ್ಲಿಯವರೆಗೂ ಆಡಳಿತ ನಡೆಸಿದ(internal reservation) ಎಲ್ಲಾ ಸರ್ಕಾರಗಳು ಮಾದಿಗರನ್ನು ಮತ ಬ್ಯಾಂಕನ್ನಾಗಿ ಮಾಡಿಕೊಂಡಿವೆ. ಕಾಂತರಾಜ್ ವರದಿ ಸಿದ್ದವಾಗಿದ್ದರೂ ದತ್ತಾಂಶ ಸಂಗ್ರಹಕ್ಕಾಗಿ ನಾಗಮೋಹನ್‍ದಾಸ್ ಆಯೋಗ ರಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೋದೊಂದು ಮಾಡೋದೊಂದು ಎನ್ನುವಂತಾಗಿದೆ ದಲಿತರು ಇನ್ನು ಸಮಾಜದ ಮುಖ್ಯವಾಹಿನಿಗೆ ಬರದಿರಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾರಸಂದ್ರ ಮುನಿಯಪ್ಪ ಆಪಾದಿಸಿದರು.
ಇದನ್ನೂ ಓದಿ: ಸಹಕಾರ ಸಂಘದಿಂದ ಬೆಂಬಲ ಬೆಲೆಯಲ್ಲಿ ಸಿರಿಧಾನ್ಯ ಖರೀದಿ : ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಶಾಸಕ ಬಿ.ಜಿ.ಗೋವಿಂದಪ್ಪ
ಆಲ್ ಇಂಡಿಯಾ ಬಹುಜನ ಸಮಾಜಪಾರ್ಟಿ ರಾಷ್ಟ್ರೀಯ ಸಂಚಾಲಕ ಗೋಪಿನಾಥ್, ರಾಜ್ಯ ಸಂಚಾಲಕ ಆರ್.ಮುನಿಯಪ್ಪ, ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ಭೀಮನಕೆರೆ ಶಿವಮೂರ್ತಿ, ಲಕ್ಷ್ಮಮ್ಮ, ಮಹಾಂತೇಶ್ ಕೂನಬೇವು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
