Chitradurga News | Nammajana.com | 13-08-2025
ನಮ್ಮಜನ.ಕಾಂ,ಚಿತ್ರದುರ್ಗ: ಸಹಕಾರ(essay and debate competition) ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಸಹಕಾರ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧಾ ಕಾರ್ಯಕ್ರಮ ಇದೇ ಆಗಸ್ಟ್ 16ರಂದು ನಗರದ ಪಿಳ್ಳೇಕೆರೆನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆಗಳ ಕೆಎಂಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ತೊರೆಕೋಲಮ್ಮನಹಳ್ಳಿಯಲ್ಲಿ ಸಂಭ್ರಮದ ಹೆಡಿಗೆ ಜಾತ್ರೆ ಎಂಬ ವಿಶಿಷ್ಠ ಆಚರಣೆ ಇನ್ನೂ ಜೀವಂತ

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಹಕಾರ ಕುರಿತು ಪ್ರಬಂಧ ಸ್ಪರ್ಧೆ ವಿಷಯ:-“ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳುವಳಿಯ ಪಾತ್ರ” “ಸಹಕಾರ” ವಿಷಯ ಅಳವಡಿಕೆ “Role of the cooperative movement in integrated rural development”.
ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ವಿಷಯ “ಶಾಲಾ ಕಾಲೇಜು ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಹಾಗೂ ಸಹಕಾರಿ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಮಾತ್ರವೇ ಸಹಕಾರಿ ವ್ಯವಸ್ಥೆ ಸದೃಢಗೊಳ್ಳಬಲ್ಲದು” “ The co-operative system can only be strengthened by including cooperative subjects in school and college curriculam and establishing cooperatives universities” ಎಂಬ ವಿಷಯ ಕುರಿತು ಪರ ಮತ್ತು ವಿರೋಧ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.
ಜಿಲ್ಲೆಯ ಪ್ರೌಢಶಾಲೆ ಹಾಗೂ(essay and debate competition) ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಕಳುಹಿಸಿಕೊಡಲು ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಭವನ, ಬಿ.ಎಲ್.ಗೌಡ ಲೇ ಔಟ್, ಕೆಳಗೋಟೆ, ಚಿತ್ರದುರ್ಗ-577501 ಮೊಬೈಲ್ ಸಂಖ್ಯೆ 7899688528, 9663100410, 9980803050, ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
