Chitradurga news | nammajana.com | 16-08-2025
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ(Independence Day) ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನೌಕರರ ಭವನ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸರ್ವ ನೌಕರ ಬಾಂಧವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.

ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಕರೆಂಟ್ ಇರಲ್ಲ
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಮಲ್ಲಿಕಾರ್ಜುನ್, ಉಪಾಧ್ಯಕ್ಷ ತುಕಾರಾಂರಾವ್ ಬಿ.ವಿ. ಸೇರಿದಂತೆ ವಿವಿಧ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
