Chitradurga News | Nammajana.com | 16-08-2025
ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ರಾಜ್ಯದಲ್ಲಿ(appoint teachers) ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಇದನ್ನೂ ಓದಿ: ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
3 ರಿಂದ 4 ತಿಂಗಳಲ್ಲಿ 17 ಸಾವಿರ ಶಿಕ್ಷಕರ ನೇಮಕ
ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೇ ಕೇವಲ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಶಿಕ್ಷಣ ನೀತಿ (ಎಸ್‍ಇಪಿ) ಕರಡು ವರದಿ ಸಲ್ಲಿಸಲಾಗಿದ್ದು, ಅದರಲ್ಲಿರುವ ನ್ಯೂನತೆಗಳನ್ನು ಪರಿಶೀಲನೆ ನಡೆಸಲು ಉಪ ಸಮಿತಿ ರಚನೆ ಮಾಡಿ, ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಒಪ್ಪುವುದಿಲ್ಲ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: Chitradurga ರಸ್ತೆ ಅಗಲೀಕರಣ | ಎಷ್ಟು ಮೀಟರ್ ರಸ್ತೆ, ಎಷ್ಟು ಬಿಲ್ಡಿಂಗ್ ಗಳು ತೆರವು | ಸಭೆಗೆ DC ಕೊಟ್ಟ ಡಿಟೈಲ್ ಇಲ್ಲಿದೆ
15 ದಿನದಲ್ಲಿ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆ ಘೋಷಣೆ
ರಾಜ್ಯದಲ್ಲಿ ಪ್ರಸ್ತುತ 307 ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷವೇ ರಾಜ್ಯ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆಗಳನ್ನು 15 ದಿನದೊಳಗಾಗಿ ಘೋಷಣೆ ಮಾಡಲಾಗುವುದು. ಇದರ ಜೊತೆಗೆ ಹೈದರಬಾದ್ ಕರ್ನಾಟಕದಲ್ಲಿ ಅಕ್ಷರ ಅವಿಷ್ಕಾರ ವತಿಯಿಂದ 100 ಕೆಪಿಎಸ್ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿದೆ.
ಒಂದು ಕೆಪಿಎಸ್ ಶಾಲೆಯಲ್ಲಿ(appoint teachers) 1200 ಮಕ್ಕಳು ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಬಹುದಾಗಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಲಿದೆ ಎಂದು ಹೇಳಿದರು
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನಕಲು ತಡೆಗಟ್ಟುವ ನಿಟ್ಟಿನಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು, ಮಕ್ಕಳು ಸ್ವಂತ ಶಕ್ತಿ, ಸಾಮಾಥ್ರ್ಯದ ಮೇಲೆ ಉತ್ತೀರ್ಣರಾಗುವ ವ್ಯವಸ್ಥೆಗಾಗಿ ಪರೀಕ್ಷೆ-1, ಪರೀಕ್ಷೆ-2, ಪರೀಕ್ಷೆ-3 ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಇಳಿಕೆ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಶಾಲಾ ಶಿಕ್ಷಣ ಉಪನಿರ್ದೇಶಕರಾದ ಎಂ.ಆರ್.ಮಂಜುನಾಥ್, ನಾಸಿರುದ್ದೀನ್, ತಹಶೀಲ್ದಾರ್ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಶಾಲಾ ಪುನಃಶ್ಚೇತನ ಮತ್ತು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ. ವಿ.ವೀರಭದ್ರಯ್ಯ, ಗೌರವಾಧ್ಯಕ್ಷ ಎ.ಚಂದ್ರಾರೆಡ್ಡಿ, ಕಾರ್ಯಾಧ್ಯಕ್ಷ ಜಲೀಲ್ ಸಾಬ್, ವಿಶ್ವ ಮಾನವ ಸಾಂಸ್ಕøತಿಕ ಮತ್ತು ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ನೀಲಕಂಠದೇವ, ಸಮಿತಿಯ ಲಕ್ಷ್ಮಿಕಾಂತ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252