Chitradurga News | Nammajana.com | 17-08-2025
ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಹೊಳಲ್ಕೆರೆ(POP) ಪುರಸಭೆ ವ್ಯಾಪ್ತಿಯಲ್ಲಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: Chitradurga ರಸ್ತೆ ಅಗಲೀಕರಣ | ಎಷ್ಟು ಮೀಟರ್ ರಸ್ತೆ, ಎಷ್ಟು ಬಿಲ್ಡಿಂಗ್ ಗಳು ತೆರವು | ಸಭೆಗೆ DC ಕೊಟ್ಟ ಡಿಟೈಲ್ ಇಲ್ಲಿದೆ

ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲು ನಗರ ಸಭೆ, ಪೊಲೀಸ್, ಅಗ್ನಿ ಶಾಮಕ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಪ್ರತಿಷ್ಠಾಪನೆ ಸ್ಥಳಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿನಿತ್ಯ ಉತ್ಪನ್ನವಾಗುವ ತ್ಯಾಜ್ಯವನ್ನು ಪುರಸಭೆ ಕಸ ಸಂಗ್ರಹ ವಾಹನಕ್ಕೆ ನೀಡಬೇಕು.
ಗಣೇಶ ವಿಸರ್ಜನೆಗೆ ತಾಲ್ಲೂಕು(POP) ಪಂಚಾಯಿತಿ ಹಿಂಭಾಗದಲ್ಲಿರುವ ಎನ್.ಇ.ಎಸ್. ಕಾಲೋನಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಪಿ.ಓ.ಪಿ, ರಾಸಾಯನಿಕ ಬಣ್ಣಗಳ ವಿಗ್ರಹ ಮಾರಾಟ ಹಾಗೂ ನಿಗದಿತ ಸ್ಥಳ ಹೊರತು ಪಡಿಸಿ ಗಣೇಶ ವಿರ್ಸಜನೆ ಮಾಡುವುದು ಕಂಡುಬಂದರೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ: appoint teachers: 17 ಸಾವಿರ ಶಿಕ್ಷಕ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ
ಸಾರ್ವಜನಿಕರು ಪರಿಸರ ಸ್ನೇಹಿ, ಬಣ್ಣ ರಹಿತ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಹೊಳಲ್ಕೆರೆ ಪುರಸಭೆ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252