Chitradurga news|Nammajana.com|17-8-2025
ನಮ್ಮಜನ.ಕಾಂ, ಚಿತ್ರದುರ್ಗ: ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ಸಂಬಂಧ ಈ ಕಾಲಾಹರಣದ ನೀತಿಯನ್ನು ಪಕ್ಕಕ್ಕೆ ಇಟ್ಟು ತಕ್ಷಣ ಜಾರಿ ಮಾಡಬೇಕು ಎಂದು ಸ್ವಾಭಿಮಾನಿ ಮಾದಿಗರ ಮಹಾ ಸಭಾ ಸಂಚಾಲಕ ಮೋಹನ್ ಒತ್ತಾಯಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ ಆಗಸ್ಟ್ 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳ ಮೀಸಲಾತಿ ಘೋಷಿಸಬೇಕು.

ರಾಜ್ಯದಾದ್ಯಂತ ತಮಟೆ ಚಳುವಳಿ
ಸರ್ಕಾರವನ್ನು ಎಚ್ಚರಿಸಲು ರಾಜ್ಯದೆಲ್ಲೆಡೆ ತಮಟೆ ಚಳವಳಿ ನಡೆಯಲಿದೆ. ಇಷ್ಟಾಗಿಯೂ ಆ 19ರ ಸಂಪುಟ ಸಭೆಯಲ್ಲಿ ಮತ್ತೊಂದು ಸಮಿತಿ ರಚಿಸಲು ಮುಂದಾದರೆ ಉಗ್ರ ಹೋರಾಟಕ್ಕೆ ಇಳಿಯಬೇಕಾತ್ತದೆ ಎಂದು ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆಯನ್ನು ಸ್ವಾಭಿಮಾನಿ ಮಾದಿಗರ ಮಹಾ ಸಭಾ ನೀಡಿದೆ.
ನ್ಯಾ ನಾಗಮೋಹನ್ ದಾಸ್ ವರದಿ ಸಲ್ಲಿಸಿದ ತರುವಾಯ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಆಗಸ್ಟ್ 19ಕ್ಕೆ ಮುಂದೂಡಿರುವುದು ಒಳ ಮೀಸಲಾತಿ ವಿರೋಧಿ ಸರ್ಕಾರ ಎಂದು ಬಿಂಬಿಸುತ್ತಿದೆ.
ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸಿನಲ್ಲಿ ಆದಿಕರ್ನಾಟಕ (ಜನಸಂಖ್ಯೆ:1.47.199).ಆದಿದ್ರಾವಿಡ (ಜನಸಂಖ್ಯೆ: 3.20.641).ಆದಿಆಂಧ್ರ (ಜನಸಂಖ್ಯೆ: 7,114) ಇದನ್ನು ‘ಇ’ ಪ್ರವರ್ಗದಲ್ಲಿ ಗುರುತಿಸಲಾಗಿದೆ. ಈಗ ‘ಅ’ ಗುಂಪಿಗೆ ಇಡಿಯಾಗಿ ‘ಇ’ ಗುಂಪಿಗೆ ಸೇರಿಸುವ ಹುನ್ನಾರ ನೆಡದಿದೆ. ‘ಇ’ ಗುಂಪಿನಲ್ಲಿ ಮೂಲ ಜಾತಿಹೇಳದೆ ಆದಿದ್ರಾವಿಡ ಎಂದು ಗುರುತಿಸಿಕೊಂಡವರು 3.20.641 ಜನ ಇದ್ದಾರೆ. ಇವರಲ್ಲಿ ಬಹುತೇಕ ಜನ ಪೌರಕಾರ್ಮಿಕ ವೃತ್ತಿಯಲ್ಲಿ ಇದ್ದು ಮಾದಿಗ ಸಂಬಂಧಿತ ಜಾತಿಗಳವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.
ಒಳ ಮೀಸಲಾತಿ ವಿಳಂಬದಿಂದ ಇತರೆ ಸಮುದಾಯಕ್ಕೂ ಬಿಸಿ
ಒಳಮೀಸಲಾತಿ ಜಾರಿ ಆಗುವವರೆಗೆ ಉದ್ಯೋಗ ಅವಕಾಶಗಳು ಬಂದ್ ಆಗಿರುವುದರಿಂದ ಎಸ್ಸಿ ಅಲ್ಲದ ಸಮಾಜಗಳೂ ಸಿದ್ಧರಾಮಯ್ಯನ ವಿಳಂಬ ಧೋರಣೆಯ ಬಗ್ಗೆ ರೋಸಿ ಹೋಗಿದ್ದಾರೆ. ಉದ್ಯೋಗ ಅವಕಾಶಗಳನ್ನು ನಿಲ್ಲಿಸಿ, ಎಲ್ಲ ಮೂರು ಗುಂಪಿನ ದಲಿತರನ್ನು ಬೀದಿಗೆ ಬರುವಂತೆ ಮಾಡಿರುವುದು ಸಿದ್ದರಾಮಯ್ಯನವರ ಸಾಧನೆಯಾಗಿದೆ. ಸಿದ್ದರಾಮಯ್ಯನವರು ಆಗಸ್ಟ್ 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳಮೀಸಲಾತಿ ಘೋಷಿಸಬೇಕು. ಇಷ್ಟಾಗಿಯೂ ಆ 19ರ ಸಂಪುಟ ಸಭೆಯಲ್ಲಿ ಮತ್ತೊಂದು ಸಮಿತಿ ರಚಿಸಲು ಮುಂದಾದರೆ ಉಗ್ರ ಹೋರಾಟಕ್ಕೆ ಇಳಿಯಬೇಕಾತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಯಿತು.
ಇದನ್ನೂ ಓದಿ: Adike Rate : ಅಡಕೆ ಧಾರಣೆ | 17 ಆಗಸ್ಟ್ 2025 | ಇಂದಿನ ಅಡಿಕೆ ರೇಟ್ ಎಷ್ಟಿದೆ
ಚಿತ್ರದುರ್ಗ ತಾ.ಪಂ. ಮಾಜಿ ಅಧ್ಯಕ್ಷರಾದ ಜಯ್ಯಪ್ಪ ಮಾತನಾಡಿ, ಸರ್ಕಾರದ ವಿಳಂಬ ನೀತಿಯ ಸಮಾಯಾವಕಾಶ ಬಳಸಿಕೊಂಡು ನಮ್ಮ ಸೋದರ ಗುಂಪಿನವರು ಬಲಾಬಲಾ ಪ್ರದರ್ಶನಕ್ಕೆ ಇಳಿದಿರುವು ಒಳ್ಳೆಯ ಬೆಳವಣಿಗೆಯಲ್ಲ, ಸರ್ಕಾರದಲ್ಲಿ ಪ್ರಭಾವಿ ಸಚಿವರೂ ತಮ್ಮವರೇ ಇದ್ದರೂ ಅನಗತ್ಯವಾಗಿ ಬೀದಿಗಿಳಿದು ದ್ವೇಷ ಭಾಷಣ ಮಾಡುವುದು ಪರಸ್ಪರ ಅಂತರ ಹೆಚ್ಚು ಮಾಡುತ್ತದೆ.ಈ ಬೆಳವಣಿಗೆಗಳ ಹಿಂದೆ ಇದ್ದಾರೆಂಬ ಮಾಹಿತಿಗಳು ಬಂದಿದೆ.
ಸಿದ್ದರಾಮಯ್ಯನವರು 2013 ರಿಂದ 2018ರ ವರೆಗೆ ಮುಖ್ಯಮಂತ್ರಿ ಆದಾಗಲೂ ಇದೇ ಏಳಂಬ ದ್ರೋಹದ ಚಾಳಿ ನಡೆಸಿದ್ದರು. ಈಗಲೂ ಅದನ್ನೇ ಮುಂದುವರಿಸಿದ್ದಾರೆ. ಸಿದ್ಧರಾಮಯ್ಯನವರು ಮೂರು ಸಚಿವರ ಕೈಗೊಂಬೆಯಾಗಿದ್ದಾರೆ ಎಂಬುದು ಸಿದ್ಧರಾಮಯ್ಯನವರು ಸ್ವತಂತ್ರವಾಗಿ ಒಂದು ಸಚಿವ ಸಂಪುಟ ಸಭೆ ನೆಡೆಸುವಷ್ಟೂ ಧೈರ್ಯ. ಹಿಡಿತ ಉಳಿಸಿಕೊಂಡಿಲ್ಲ.
ಆಗಸ್ಟ್ 1ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ವರ್ಷ ಕಳೆಯಿತು ಒಂದು ಹೆಜ್ಜೆಯೂ ಮುಂದೆ ಹಾಕದೆ ಯಾರದೋ ಆಣತಿಗೆ ತಕ್ಕಂತೆ ಸಿದ್ಧರಾಮಯ್ಯ ನಿರ್ಧಾರ ತೆಗೆದುಕೊಳ್ಳುತ್ತಿ ರುವುದನ್ನು ನೋಡಿದರೆ ನ್ಯಾ ನಾಗಮೋಹನ್ ದಾಸ್ ವರದಿಗೂ, ನ್ಯಾ. ಕಾಂತರಾಜ್ ವರದಿಗೆ ಆದ ಗತಿಯೇ ಆಗುತ್ತವೆಯೇನೊ ಎಂಬ ಆತಂಕ ನಮ್ಮದು ಎಂದಿದ್ದಾರೆ.
ಸುದ್ದಿ ಗೋಷ್ಟಿಯಲ್ಲಿ ಮಾಜಿ ಅಧ್ಯಕ್ಷ ಜಯ್ಯಪ್ಪ, ಹೆಚ್. ಮಹಾಂತೇಶ, ಚನ್ನಗಾನಹಳ್ಳಿ ಮಲ್ಲೇಶ್, ರುದ್ರಮುನಿ, ಪ್ರಹ್ಲಾದ್ ಬಸಣ್ಣ, ತಿಪ್ಪೇಸ್ವಾಮಿ, ಪರಶುರಾಮ್, ಕೃಷ್ಣಮೂರ್ತಿ, ಮಲ್ಲಿಕಾರ್ಜನ್, ರವಿಕುಮಾರ್, ಬಸಮ್ಮ, ಕೆಂಚಪ್ಪ, ಕಲ್ಲೇಶ್, ಮಂಜುನಾಥ್, ಗೀರೀಶ್ ನರಸಿಂಹಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252