Chitradurga News | Nammajana.com | 18-08-2025
ನಮ್ಮಜನ ನ್ಯೂಸ್ ಕಾಂ,ಹೊಸದುರ್ಗ: ರಾಮಾಯಣದ (Ayodhya) ಮೂಲಕ ಜಗತ್ತಿಗೆ ರಾಮನನ್ನು ಪರಿಚಯಿಸಿದ್ದು ವಾಲ್ಮೀಕಿ ಮಹರ್ಷಿಗಳು, ರಾಮನಿಗೆ ಮಂದಿರ ಕಟ್ಟಲಾಗಿದೆ ಆದರೆ ರಾಮನನ್ನೇ ಪರಿಚಯಿಸಿ ಕೊಟ್ಟ ವಾಲ್ಮೀಕಿ ಮಹರ್ಷಿಗಳನ್ನು ತಿರಸ್ಕಾರ ಮಾಡುವುದು ಸರಿಯಲ್ಲ ಶೀಘ್ರವೇ ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: ಗುಂಡಿ ಬಿದ್ದು ಹದಗೆಟ್ಟ ರಸ್ತೆ : ವಾಹನ ಸವಾರರ ಪರದಾಟ

ಪಟ್ಟಣದ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘ ನಾಯಕ ಸಮಾಜ ಮತ್ತು ವಾಲ್ಮೀಕಿ ಯುವಸೇನಾ ಪಡೆ ವತಿಯಿಂದ ಭಾನುವಾರ ನಡೆದ ವಾಲ್ಮೀಕಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ನಮ್ಮನ್ನಾಳುವ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ನಮ್ಮಿಂದ ಮತ ಹಾಕಿಸಿಕೊಂಡು ಅಧಿಕಾರಕ್ಕೆ ಬಂದ ತಕ್ಷಣ ಮರೆತು ಬಿಡುತ್ತಾರೆ. ಈ ಹಿನ್ನೆಲೆಯಲ್ಲಿ ನಾವು ಜಾಗೃತರಾಗಿ ರಾಜಕೀಯ ವಾಗಿ ಸಂಘಟನೆಗೊಳ್ಳುವ ಅನಿವಾರ್ಯತೆಯಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ(Ayodhya) ಬಿ.ಜಿ.ಗೋವಿಂದಪ್ಪ ಮಾತನಾಡಿ, ಪೋಷಕರು ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರಬೇಕು. ಶಿಕ್ಷಣಕ್ಕೆ ಅನುಕೂಲಕರ ವಾಗುವಂತಹ ವಾತಾವರಣ ನಿರ್ಮಾಣ ಮಾಡಿ. ಮೊಬೈಲ್ ಹುಚ್ಚು ಬಿಡಿಸಿ, ಸಂಸ್ಕಾರ ಕಲಿಸಿ. ಸಮುದಾ ಯಕ್ಕೆ ತನ್ನದೇ ಆದ ಇತಿಹಾಸವಿದ್ದು ಆದರ್ಶ ಪುರುಷ ರನ್ನು ಪ್ರೇರಣೆಯಾಗಿ ತೆಗೆದುಕೊಂಡು ಸಾಧಕರಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ: ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಠಕ್ಕೆ ಸಚಿವ ಡಿ.ಸುಧಾಕರ್ ಭೇಟಿ
ನಾಯಕ ಸಮುದಾಯದ ಮುಖಂಡರ ಸಭೆ ಕರೆದು ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ. ನಿರಂತರತೆ, ಕಠಿಣ ಪರಿಶ್ರಮ, ತಾಳ್ಮೆಯಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ. ವಾಲ್ಮೀಕಿ ನಾಯಕ ನೌಕರರ ಸಂಘದ ಕಾರ್ಯದರ್ಶಿ ಮೈಲಾರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಸಕರು ಮದಕರಿ ನಾಯಕರ ಪುತ್ತಳಿ ಮತ್ತು ಇತರ ಪ್ರಗತಿ ಕಾರ್ಯಗಳಿಗೆ ಸಹಕರಿಸಿದ್ದಾರೆ.
ಅದರಂತೆಯೇ ಹೊಸದುರ್ಗ ಪಟ್ಟಣದ ನ್ಯೂ ಬನಶಂಕರಿ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ರಸ್ತೆ ಮಾಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಪ್ರತ್ಯೇಕ ಹಾಸ್ಟೆಲ್ ಮಾಡಲು 4 ಎಕರೆ ಜಮೀನನ್ನು ನೀಡಬೇಕೆಂದು ಮನವಿ ಮಾಡಿದರು.
ಈ ವೇಳೆ ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಉಪನ್ಯಾಸ ನೀಡಿದರು. ತಹಸೀಲ್ದಾರ್‌ತಿರುಪತಿ ಪಾಟೀಲ್ ಮಾತನಾಡಿದರು. ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ
ಕಾರ್ಯಕ್ರಮದಲ್ಲಿ ಮುಖ್ಯ ಭಾಗವಾಗಿ(Ayodhya) ಎಸ್ ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಪಡೆದ ವಿದ್ಯಾ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ನಿವೃತ್ತ ನೌಕರರಿಗೆ, ಮುಖಂಡರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ನಾಯಕ ಸಮಾಜದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ನಾಗರಾಜ್, ತಿಪ್ಪೇಸ್ವಾಮಿ, ತುಂಬಿನಕೆರೆ ಬಸವರಾಜ್, ಕಾರ್ಯದರ್ಶಿ ರಂಗನಾಥ, ಸಹ ಕಾರ್ಯದರ್ಶಿ ರಂಗನಾಥ್, ಉಪಾಧ್ಯಕ್ಷ ಶೇಖರಪ್ಪ, ಗೌರವ್ಯಾಧ್ಯಕ್ಷ ನಾಗರಾಜ್, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ವಿನಯ್, ಸಹಾಯಕ ಲೆಕ್ಕಾಧಿಕಾರಿ ಆಂಜಿನಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಾಂತಪ್ಪ, ಮುಖಂಡರಾದ ಅರುಣ್ ಗಂಗಾಧರಪ್ಪ ಮತ್ತು ನಾಗರಾಜ್ ಸೇರಿದಂತೆ ಇನ್ನಿತರ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
