Chitradurga news|Nammajana.com|20-8-2025
ನಮ್ಮಜನ.ಕಾಂ, ಬೆಂಗಳೂರು: ಮಾದಿಗ ಸಮುದಾಯದ (internal reservation) ಹಲವು ವರ್ಷಗಳ ಹೋರಾಟಕ್ಕೆ ಫಲ ದೊರತ್ತಂತೆ ಆಗಿದೆ. ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಹೋರಾಟಗಳು, ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಸಲ್ಲಿಸಿರುವ ಆಯೋಗ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ಸ್ವಲ್ಪ ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಂಗಳವಾರ ತಡರಾತ್ರಿಯ ವರೆಗೆ ನಡೆದ ವಿಶೇಷ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಒಳಮೀಸಲಾತಿ ಜಾರಿ (internal reservation) ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಪರಿಶಿಷ್ಟ ಜಾತಿಗಳ ಒಳಗಿನ 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಲಾಗಿದೆ. ಅಂದರೆ ಎಡಗೈ, ಬಲಗೈ ಮತ್ತು ಸ್ಪಶ್ಯ ಎಂದು ವರ್ಗೀಕರಿಸಲು ಸಚಿವ ಸಂಪುಟದಲ್ಲಿ (internal reservation) ನಿರ್ಣಯ ಮಾಡಲಾಗಿದೆ. ಪರಿಶಿಷ್ಟ ಜಾತಿಯವರಿಗೆ ಶೇ 17ರಷ್ಟಿರುವ ಮೀಸಲಾತಿಯನ್ನು ಎಡಗೈ, ಬಲಗೈ ಸಂಬಂಧಿತ ಜಾತಿಗಳ ಗುಂಪಿಗೆ ತಲಾ ಶೇ 6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪಶ್ಯ’ ಗುಂಪುಗಳಿಗೆ ಶೇ 5 ಮೀಸಲಾತಿ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಜಾತಿಗಳನ್ನು ಆಯೋಗವು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯವಿರುವ ಶೇ 17 ಮೀಸಲಾತಿಯನ್ನು ಪ್ರವರ್ಗ ‘ಎ’ಗೆ ಶೇ 1 (ಒಟ್ಟು 59 ಜಾತಿಗಳು), ಪ್ರವರ್ಗ ‘ಬಿ’ಗೆ ಶೇ 6 (18 ಜಾತಿಗಳು), ಪ್ರವರ್ಗ ‘ಸಿ’ಗೆ ಶೇ 5 (17 ಜಾತಿಗಳು), ಪ್ರವರ್ಗ ‘ಡಿ’ಗೆ ಶೇ 4 (4 ಜಾತಿಗಳು), ಪ್ರವರ್ಗ ‘ಇ’ಗೆ ಶೇ 1ರಂತೆ (3 ಜಾತಿಗಳು) ಹಂಚಿಕೆ ಮಾಡಿತ್ತು.
ಸಂಪುಟ ನಿರ್ಣಯ ಯಾರಿಗೆಷ್ಟು?
ಪ್ರವರ್ಗ ಎ
- ಬಲಗೈ ಜಾತಿಗಳು 6%
ಪ್ರವರ್ಗ ಬಿ
- ಎಡಗೈ ಜಾತಿಗಳು 6%
ಪ್ರವರ್ಗ ಸಿ
- ಸ್ಪೃಶ್ಯ ಅಲೆಮಾರಿ 5%
ಆಯೋಗದ ವರದಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಿದ್ಧಪಡಿಸಿದ್ದ ಟಿಪ್ಪಣಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು ಸಚಿವ ಸಂಪುಟ (internal reservation) ಸಭೆಯಲ್ಲಿ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಲು ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ದತ್ತಾಂಶಗಳ ಕುರಿತಂತೆ ಆಯೋಗದ ವರದಿಯ-ಲ್ಲಿರುವ ಅಂಶಗಳ ಪ್ರಾತ್ಯಕ್ಷಿಕೆ ನೀಡಿದ ಮಣಿವಣ್ಣನ್, ಎಲ್ಲರನ್ನೂ ಸಮನಾಗಿ ಕಾಣುವ ಸಾಮಾಜಿಕ ನ್ಯಾಯದ ವರದಿ ಬಂದಿದೆ ಎಂದು ಸಭೆಗೆ ಮಾಹಿತಿ ನೀಡಿದರು’ ಎಂದು ತಿಳಿದು (internal reservation) ಬಂದಿದೆ.
ಇದನ್ನೂ ಓದಿ: Today Dina Bhavishya | ದಿನ ಭವಿಷ್ಯ | 20 ಆಗಸ್ಟ್ 2025 | ಯಾವ್ಯಾವ ರಾಶಿಗೆ ಶುಭಯೋಗ
ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದೇನು
ಪರಿಶಿಷ್ಟ ಜಾತಿಯಲ್ಲಿ 101 ಮೂಲ ಪರಿಶಿಷ್ಟ ಜಾತಿಯ ನೂರೊಂದು ಜಾತಿಗಳಿಗೂ ಸಾಮಾಜಿಕ ನ್ಯಾಯ ದೊರಕಿದ್ದು ಯಾವ ಜಾತಿಗೂ ಅನ್ಯಾಯವಾಗದ ರೀತಿಯಲ್ಲಿ (internal reservation) ತೀರ್ಮಾನವಾಗಿದೆ. ಇದರ ವಿವರವನ್ನು ಮುಖ್ಯಮಂತ್ರಿ ಪ್ರಕಟಿಸಲಿದ್ದಾರೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ,
ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದೇನು
ಸಚಿವ ಸಂಪುಟ ಸಭೆಯಲ್ಲಿ ಎಲ್ಲರೂ ಒಪ್ಪುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡಲಿದ್ದಾರೆ.
