Chitradurga News | Nammajana.com | 20-08-2025
ನಮ್ಮಜನ ನ್ಯೂಸ್ ಕಾಂ,ಮೊಳಕಾಲ್ಮುರು: ಎರಡು(Accident) ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಪಟ್ಟಣದ ಹಾನಗಲ್, ರಾಯದುರ್ಗ ರಾಷ್ಟ್ರೀಯ ಹೆದ್ದಾರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಮಂಗಳವಾರ ನಡೆದಿದೆ.
ಇದನ್ನೂ ಓದಿ: ಧರ್ಮಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಆಗ್ರಹ

ಮೃತನನ್ನು ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ, ಮ್ಯಾಸರಹಟ್ಟಿ ಗ್ರಾಮದ ಸುರೇಶ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಮೃತನು ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪಟ್ಟಣದಿಂದ ಹಾನಗಲ್ ಮಾರ್ಗವಾಗಿ ಪ್ರಯಾಣಿಸುತ್ತಿರುವಾಗ ಹಾನಗಲ್ ಕಡೆಯಿಂದ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದ ಬೈರಾಪುರ ಗ್ರಾಮದ ಪ್ರಕಾಶ್ ಎಂಬುವರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರು ಬಿದ್ದು ಗಾಯಗೊಂಡಿದ್ದಾರೆ.
ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ(Accident) ದಾಖಲು ಮಾಡಿದ್ದಾಗ ಸುರೇಶ್ ಕುಮಾರ್ ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ | ಎಡಗೈಗೆ 6 ಬಲಗೈಗೆ 6 ಉಳಿದವರಿಗೆ 5 | ಇಲ್ಲಿದೆ ಸಂಪೂರ್ಣ ಡಿಟೈಲ್
ಸ್ಥಳಕ್ಕೆ ಪಿಎಸ್‌ಐ ಮಹೇಶ್ ಹೊಸಪೇಟೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252