Chitradurga news|Nammajana.com|20-8-2025
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಕಾಲೇಜು ವಿದ್ಯಾರ್ಥಿನಿ ಮೃತ ದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. (Chitradurga murder)ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಹೈವೇ) ಖಾಸಗಿ ಜಮೀನಿನಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ.
ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಶಂಕೆಯಿದೆ. ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಗೆ ತರಲಾಗಿದೆ. (Chitradurga murder)

ಮೃತ ವಿದ್ಯಾರ್ಥಿನಿ ಹಿರಿಯೂರು ತಾಲೂಕಿನ ಕೋವೆರಹಟ್ಟಿ ಮೂಲದವಳು ಎಂದು ಗುರುತಿಸಿದ್ದು, ಪೋಷಕರ ಆಕ್ರಂಧನ (Chitradurga murder) ಮುಗಿಲು ಮುಟ್ಟಿತ್ತು.
ವಿದ್ಯಾರ್ಥಿನಿ ಅರೆಬರೆ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆ
ಚಿತ್ರದುರ್ಗದಲ್ಲಿ ಹಾಸ್ಟೆಲ್ ನಲ್ಲಿದ್ದು ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಅರೆಬರೆ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. (Chitradurga murder) ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ದಾಖಲೆ ಕಲೆಹಾಕಿದ್ದಾರೆ. ಚಿತ್ರದುರ್ಗ ಗ್ರಾಮಾಂತರ (Chitradurga murder) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ನೀರಿನ ಮಟ್ಟ ಏರಿಕೆ | Vani Vilasa Sagara Dam
ಎಬಿವಿಪಿಯಿಂದ ಕಾಲೇಜು ಬಂದ್ ಕರೆ:
ವಿದ್ಯಾರ್ಥಿನಿಯ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಚಿತ್ರದುರ್ಗ ನಗರದ ಎಲ್ಲ ಕಾಲೇಜುಗಳ ಬಂದ್ ಕರೆಕೊಟ್ಟಿದೆ ಎಂದು ವಿಭಾಗ ಸಂಚಾಲಕ ಗೋಪಿ (Chitradurga murder) ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252