Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಒಳ‌ ಮೀಸಲಾತಿಗೆ ಸರ್ಕಾರ ಅಧಿಕೃತ ಮುದ್ರೆ | ಸಿಎಂ ವಿಧಾನ ಸಭೆಯಲ್ಲಿ ಏನೆಲ್ಲ‌ ಹೇಳಿದರು? Internal Reservation Karnataka |
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಒಳ‌ ಮೀಸಲಾತಿಗೆ ಸರ್ಕಾರ ಅಧಿಕೃತ ಮುದ್ರೆ | ಸಿಎಂ ವಿಧಾನ ಸಭೆಯಲ್ಲಿ ಏನೆಲ್ಲ‌ ಹೇಳಿದರು? Internal Reservation Karnataka |
ಇಂದಿನ ಸುದ್ದಿ

ಒಳ‌ ಮೀಸಲಾತಿಗೆ ಸರ್ಕಾರ ಅಧಿಕೃತ ಮುದ್ರೆ | ಸಿಎಂ ವಿಧಾನ ಸಭೆಯಲ್ಲಿ ಏನೆಲ್ಲ‌ ಹೇಳಿದರು? Internal Reservation Karnataka |

Nammajana Sub Editor
Last updated: 20 August 2025 5:23 PM
By Nammajana Sub Editor 4 Min Read
Share
SHARE

Chitradurga news | nammajana.com | 20-08-2025

ನಮ್ಮಜನ.ಕಾಂ,ಬೆಂಗಳೂರು:

1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ(Internal Reservation) ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ

“ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.”

ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: KV Prabhakar

2.​ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು ದಿನಾಂಕ: 12.11.2024 ರಂದು ಆದೇಶ ಸಂಖ್ಯೆ ಎಸ್‌ಡಬ್ಲೂö್ಯಡಿ/8/ಎಸ್‌ಎಲ್‌ಪಿ/2024(ಪಿ-1)ರ ಆದೇಶದ ಪ್ರಕಾರ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಲಾಯಿತು. ಸದರಿ ಆಯೋಗವು ಸೂಕ್ತ ದತ್ತಾಂಶಗಳನ್ನು (Empirical Data) ಸಂಗ್ರಹಿಸಿ, ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡಲು ಕೋರಲಾಯಿತು.

3.​ಜಸ್ಟೀಸ್ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ದಿನಾಂಕ:01.08.2025 ರಂದು ವರದಿಯನ್ನು ಸಲ್ಲಿಸಿತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದೆ.

4.​ದಿನಾಂಕ 19-8-2025 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ.

1)​ಎಡಗೈ ಸಂಬ0ಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ನೀರಿನ ಮಟ್ಟ ಏರಿಕೆ

2)​ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ0ಧಿತ ಜಾತಿಗಳನ್ನು ಎಡಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ0ಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

3)​ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬ0ಧಿತ ಮತ್ತು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ.

4)​ಸ್ಪೃಶ್ಯ ಜಾತಿಗಳ ಗುಂಪಿಗೆ ಜಸ್ಟೀಸ್(internal reservation) ನಾಗಮೋಹನ್ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

5)​ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬ0ಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬ0ಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ. ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ.

ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ.

6)​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ.

7)​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ.

8)​ ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ.

9)​ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬ0ದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅ0ಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ.

ಇದನ್ನೂ ಓದಿ: ಧರ್ಮಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಆಗ್ರಹ 

ನ್ಯಾಯಮೂರ್ತಿ ನಾಗಮೋಹನ್‌ದಾಸ್(Internal Reservation) ಅವರ ವರದಿಯನ್ನು ಮೇಲೆ ಪ್ರಸ್ತಾಪಿಸಿದ ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ ಎಂಬ ಅಂಶಗಳನ್ನು ಸದನದ ಮುಂದೆ ಮಂಡಿಸಲು ಸರ್ಕಾರವು ಸಂತೋಷ ಪಡುತ್ತದೆ. ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ.

ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನೆ? ಕೇಳಿದರೆ ನೀವು ಶಾಕ್

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ

ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case

TAGGED:ChitradurgaChitradurga NewsCM SiddaramaiahInternal reservationJustice Nagamohandas CommissionKannada NewsNammajana.comScheduled CastesState Governmentಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂನಾಗಮೋಹನ್‌ದಾಸ್ ಅಯೋಗನ್ಯಾಪರಿಶಿಷ್ಟ ಜಾತಿರಾಜ್ಯ ಸರ್ಕಾರಸಿಎಂ ಸಿದ್ದರಾಮಯ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: KV Prabhakar
Next Article today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ
ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: KV Prabhakar
ಇಂದಿನ ಸುದ್ದಿ
Student Murder | ವರ್ಷಿತಾ ಮರ್ಡರ್‌ ಕೇಸ್ | ಸ್ಫೋಟಕ ಮಾಹಿತಿ ಬಯಲು
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?