Chitradurga news|Nammajana.com|21-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣ ವಿಧಾನ ಪರಿಷತ್ನಲ್ಲಿ ಪ್ರತಿಧ್ವನಿಸಿತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಪ್ರಸ್ತಾಪಿಸಿರು.
ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ಕೊಲೆ ಆಗಿದೆ. ದಲಿತ ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾ. ಅವಳನ್ನು ಬರ್ಬರವಾಗಿ ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಚಿತ್ರದುರ್ಗದ ಹೊರ ವಲಯದಲ್ಲಿ ನಡೆದಿದೆ.

ಅತ್ಯಂತ ಬಡತನದ ಕುಟುಂಬದಿಂದ ಬಂದು ಭವಿಷ್ಯದ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ಇದ್ದಳು.ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. ರಾಜ್ಯದಲ್ಲಿ ಈ ರೀತಿ ಘಟನೆಗಳು ನಡೆದ ಸಂದರ್ಭದಲ್ಲಿ ಸರ್ಕಾರ ನ್ಯಾಯ ಕೊಡಿಸಬೇಕು. ಈ ಹತ್ಯೆಗೆ ಕಾರಣವಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹ ಮಾಡಿದರು.
ಇದನ್ನೂ ಓದಿ: ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಇಡೀ ದಿನ ಸಂಘಟನೆಗಳು ಹೋರಾಟ ಮಾಡಿವೆ. ರಾಜ್ಯ ಇಡೀ ಭಯದ ವಾತಾವರಣದಲ್ಲಿ ಇರುವಂತೆ ಮಾಡಿದೆ. ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಅಂತ ನವೀನ್ ಒತ್ತಾಯಿಸಿದರು.
