Chitradurga news | nammajana.com | 21-08-2025
ನಮ್ಮಜನ.ಕಾಂ,ಚಿತ್ರದುರ್ಗ: ಸಹಕಾರ(Cooperative Ratna Award) ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್ ಅವರ ಸಹಕಾರಿ ಸೇವೆ ಗುರುತಿಸಿ, ಸರ್ಕಾರ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ.
ಇದನ್ನೂ ಓದಿ: ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?

ಬೆಂಗಳೂರಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಸಚಿವ ಡಿ.ಸುಧಾಕರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆಗೆ ಪ್ರಶಸ್ತಿ
ಹಲವು ದಶಕಗಳಿಂದ ಸಹಕಾರ ಕ್ಷೇತ್ರದ ಮುಖಂಡರಾಗಿ ಸೇವೆ ಸಲ್ಲಿಸುವ ಮೂಲಕ ಹಲವಾರು ಸಂಘ ಸಂಸ್ಥೆಗಳ ಸ್ಥಾಪನೆ, ಬೆಳವಣಿಗೆ, ಅಭಿವೃದ್ಧಿಗೆ ಸಚಿವ ಡಿ.ಸುಧಾಕರ್ ಶ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ(Cooperative Ratna Award) ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
