Chitradurga news|Nammajana.com|22-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗಕಾಂಗ್ರೆಸ್ ಶಾಸಕ (MLA custody) ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ದಾಳಿ ಮಾಡಿ (ED raid) ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಶಾಸಕ ಕೆ.ಸಿ. ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ನಗರದ ನಾಲ್ಕು ನಿವಾಸಗಳ ಮತ್ತು ಬೆಂಗಳೂರು ನಿವಾಸದ (MLA custody) ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ (ED raid) ಪರಿಶೀಲನೆ ಮಡುತ್ತಿದ್ದಾರೆ.
ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲಿದೆ.
ಇದಕ್ಕೆ ಸಂಬಂಧಿಸಿದಂತೆ ಗೋವಾದಲ್ಲಿ ಶಾಸಕ ವೀರೇಂದ್ರ ಪಪ್ಪಿ ಮೇಲೆ 2 ಎಫ್‌ಐಆರ್ ದಾಖಲಾಗಿವೆ. ಈ ಕೇಸ್ ನಲ್ಲೇ ಆಕ್ರಮ ಹಣ ವರ್ಗಾವಣೆ ಆಗಿದೆ ಎಂದು ಇ.ಡಿ. ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ಇಂದು ಬೆಳಿಗ್ಗೆಯೇ ದಾಳಿ ನಡೆಸಿ ದಾಖಲೆಪತ್ರಗಳ ಶೋಧ ಕಾರ್ಯಾಚರಣೆ (MLA custody) ನಡೆಸುತ್ತಿದ್ದಾರೆ.
ಈ ತನಿಖೆಯ ಭಾಗವಾಗಿಯೇ ವಿಚಾರಣೆಗಾಗಿ ಸಿಕ್ಕಿಂನಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನ (MLA custody) ಹೋಟೇಲ್ ನಲ್ಲೇ ವಶಕ್ಕೆ ಪಡೆದಿದ್ದಾರೆ.
ಶಾಸಕ ಮನೆ ಜೊತೆಗೆ ಸಹೋದರ ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ (ED raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
