Chitradurga News | Nammajana.com | 01-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಪರಿಶಿಷ್ಟ(Aadhaar) ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ವಿದ್ಯಾರ್ಥಿಗಳ ಆಧಾರ್ ಜೋಡಿಣೆಯಾಗಿರುವ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನವನ್ನು ನೇರ ನಗದು ವರ್ಗಾವಣೆ ತಂತ್ರಾಂಶದ ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಆಧಾರ್ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಜಮೆ ಮಾಡುವಲ್ಲಿ ತಾಂತ್ರಿಕ ತೊಂದರೆ ಉಂಟಾಗುತ್ತದೆ.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ
ಈ ಹಿನ್ನಲೆಯಲ್ಲಿ ಆಗಸ್ಟ್(Aadhaar) 25 ರಿಂದ ಸೆಪ್ಟಂಬರ್ 7ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನ ಆಯೋಜಿಸಲಾಗಿದ್ದು ವಿದ್ಯಾರ್ಥಿಗಳು ಭಾಗವಹಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡುವಂತೆ ಚಳ್ಳಕೆರೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
