Chitradurga News | Nammajana.com | 27-09-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ತಾಲೂಕಿನ (gambling) ಹೆಗ್ಗೆರೆ ಗ್ರಾಮದ ಹನುಮಂತರಾಯ ದೇವಸ್ಥಾನದ ಬಳಿಯ ಸಾರ್ವಜನಿಕರ ರಸ್ತೆಯಲ್ಲಿ ಹಾಡುಹಗಲೇ ಜೂಜಾಟವಾಡುತ್ತಿದ್ದ ಅದೇ ಗ್ರಾಮದ ಜಗನ್ನಾಥ ಇತರೆ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ಜೂಜಾಟದ ಹಣ 4210ರೂಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಠಾಣಾ ಇನ್‌ಸ್ಪೆಕ್ಟರ್ ಕೆ. ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸ್ ಪೇದೆಗಳಾದ ಅಜಿತ್ ಕುಮಾರ್, ಶಿವರಾಜ್ ಹಾಗೂ ಇತರರೊಂದಿಗೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆಯಲಾಯಿತು.
ಇದನ್ನೂ ಓದಿ: Recruitment: ಅರೇ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
ಜೂಜಾಟದ ವಿರುದ್ದ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು ಎಂದು ತಿಳಿಸಿದ್ದಾರೆ.
