Chitradurga News | Nammajana.com | 23-4-2024
ನಮ್ಮಜನ.ಕಾಂ.ಚಳ್ಳಕೆರೆ: ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೆ ಸರಳ, ಸದೃಢವಾಗಿ ದೇಶವನ್ನು ಅಭಿವೃದ್ದಿ ಪಥದತ್ತ ಮುನ್ನಡೆಸಿದ ಖ್ಯಾತಿ ಪ್ರಧಾನಮಂತ್ರಿ ನರೇಂದ್ರಮೋದಿಯವರದ್ದು ಎಂದು ದಕ್ಷಿಣಭಾರತ ಬಹುಬಾಷ ಚಲನ ಚಿತ್ರನಟಿ ರಾಗಿಣಿ ದ್ವಿವೇದಿ ತಿಳಿಸಿದರು.
ಸೋಮವಾರ ರಾತ್ರಿ ಸುಮಾರು ೮.೩೦ರ ಸಮಯದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸುಮಾರು ೧೦ ವರ್ಷಗಳ ಕಾಲ ಯಾವುದೇ ವಿವಾದವಿಲ್ಲದೆ ದಕ್ಷ ಆಡಳಿತ ನೀಡಿದ ಕೀರ್ತಿ ಪ್ರಧಾನಮಂತ್ರಿ ನರೇಂದ್ರಮೋದಿಯವರದ್ದು ಎಂದರು.
ನನ್ನನ್ನು ಗೆಲ್ಲಸಿ ಎಂದು ಕಾರಜೋಳ ಮನವಿ:
ಎನ್ ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿರ್ದೇಶನದಂತೆ ಕನ್ನಡ ಚಿತ್ರರಂಗದ ಹೆಸರಾಂತ ನಟಿ ರಾಗಿಣಿ ದ್ವಿವೇದಿ ಚಳ್ಳಕೆರೆಗೆ ಆಗಮಿಸಿ ನಮ್ಮೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ಧಾರೆ. ಪಕ್ಷ ಹಾಗೂ ನನ್ನನ್ನು ಈ ಕ್ಷೇತ್ರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ಧಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ ಗೆಲುವನ್ನು ಸಾಧಿಸಲು ಇಂದಿನ ಈ ಕಾರ್ಯಕ್ರಮ ಹೆಚ್ಚು ಸಹಕಾರಿಯಾಗಿದೆ ಎಂದರು.
ಮೆರವಣಿಗೆ ಸಾಗಿದ ರೂಟ್ ಮ್ಯಾಪ್
ಪ್ರಚಾರ ಮೆರವಣಿಗೆಯನ್ನು ವಾಲ್ಮೀಕಿ ವೃತ್ತದ ಮೂಲಕ ಮೆರವಣಿಗೆ ಚಾಲನೆ ನೀಡಲಾಯಿತು. ನಂತರ ಅಂಬೇಡ್ಕರ್ ಮತ್ತು ನೆಹರೂ ವೃತ್ತದ ಮೂಲಕ ಮೆರವಣಿಗೆ ಸಾಗಿತು. ದಾರಿಯುದ್ದಕ್ಕೂ ಪಟಾಕಿಸಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.
ಈ ಮೆರವಣಿಗೆಯಲ್ಲಿ ಜೆಡಿಎಸ್ ಮುಖಂಡ ಎಂ.ರವೀಶ್‌ಕುಮಾರ್, ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡ ಡಿ.ಸೋಮಶೇಖಮಂಡಿಮಠ, ಸೂರನಹಳ್ಳಿಶ್ರೀನಿವಾಸ್, ನಗರಸಭಾ ಸದಸ್ಯ ಎಚ್.ಜಯಣ್ಣ, ವೆಂಕಟೇಶ್‌ಯಾದವ್, ಕೆ.ಟಿ.ಕುಮಾರಸ್ವಾಮಿ, ಸಿ.ಎಸ್.ಪ್ರಸಾದ್, ಬಾಳೆಮಂಡಿರಾಮದಾಸ್, ಬಿ.ಎಸ್.ಶಿವಪುತ್ರಪ್ಪ, ಎಂ.ಎಸ್.ಜಯರಾಮ್, ವೈ.ಕಾಂತರಾಜ್ ಮುಂತಾದವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
