Chitradurga News | Nammajana.com | 2-5-2024
ನಮ್ಮಜನ.ಕಾಂ.ಚಳ್ಳಕೆರೆ: ಲೋಕಸಭೆ ಚುನಾವಣೆ ನಂತರವೂ ಅಬಕಾರಿ ಇಲಾಖೆ ಅಧಿಕಾರಿಗಳು ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವ ನಿಟ್ಟಿನಲ್ಲಿ ನಿರಂತರ ದಾಳಿ ನಡೆಸುವ ಮೂಲಕ ಈ ದಂದೆಗೆ ಕಡಿವಾಣ ಹಾಕಲು ಯಶಸ್ವಿಯಾಗಿದ್ಧಾರೆ.
ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಗ್ರಾಮದ ಅಂಜನಮೂರ್ತಿ ಎಂಬ ವ್ಯಕ್ತಿ ತನ್ನ ಹೋಟೆಲ್‌ನಲ್ಲಿ ಸುಮಾರು ೭೪೪೦ರೂ ಮೌಲ್ಯದ ಅಕ್ರಮ ಮದ್ಯವನ್ನು ಮಾರಾಟ ಮಾಡುವ ಹಿನ್ನೆಲೆಯಲ್ಲಿ ಹೋಟೆಲ್‌ಲ್ಲಿ ದಾಸ್ತಾನು ಮಾಡಿದ್ದು ಅದನ್ನು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ್ಧಾರೆ.

ಇದನ್ನೂ ಓದಿ: ಜಾತ್ರೆಯಲ್ಲಿ ಕೋಣ ಗುದ್ದಿ ವ್ಯಕ್ತಿ ಸಾವು
ಜಿಲ್ಲಾ ಅಬಕಾರಿ ಉಪ ಆಯುಕ್ತರು, ಹಿರಿಯೂರು ಉಪವಿಭಾಗ ಅಬಕಾರಿ ಉಪಾಧೀಕ್ಷಕರು, ಚಳ್ಳಕೆರೆ ಅಬಕಾರಿ ನಿರೀಕ್ಷಕ ನಾಗರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಎಸ್.ಎಚ್.ರೇಖಾ, ಸಿಬ್ಬಂದಿಗಳಾದ ಸೋಮಶೇಖರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252