Chitradurga News | Nammajana.com | 8-5-2024
SSLC Result Chitradurga
ನಮ್ಮಜನ.ಕಾಂ. ಚಿತ್ರದುರ್ಗ : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ SSLC ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ.

ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್‌ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ ಸೈಟ್ karresults.nic.in ನಲ್ಲಿ ಫಲಿತಾಂಶ ನೋಡಬಹುದು.
SSLC ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, tonttech-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ: ರಕ್ತದ ಮಡುವಿನಲ್ಲಿದ್ದ ಯುವಕರ ಪ್ರಾಣ ಉಳಿಸಿದ ರಿಯಲ್ ಹೀರೋ PSI ಮಹೇಶ್ ಹೊಸಪೇಟೆ
ಈ ರೀತಿ ಫಲಿತಾಂಶ ಚೆಕ್ ಮಾಡಿ
ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಫಲಿತಾಂಶ ನೋಡುವುದು, ಡೌನ್‌ಲೋಡ್ ಮಾಡುವುದು ಹೇಗೆ?
ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ ಹೊಸ ಲಾಗಿನ್ ಪುಟವು ತೆರೆಯುತ್ತದೆ.
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್‌ಲೋಡ್ ಮಾಡಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252