Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Education: ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ: ಬಿ.ಟಿ.ಕುಮಾರಸ್ವಾಮಿ ಸೂಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Education: ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ: ಬಿ.ಟಿ.ಕುಮಾರಸ್ವಾಮಿ ಸೂಚನೆ
ಇಂದಿನ ಸುದ್ದಿ

Chitradurga Education: ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ: ಬಿ.ಟಿ.ಕುಮಾರಸ್ವಾಮಿ ಸೂಚನೆ

Editor Nammajana
Last updated: 31 May 2024 04:23
By Editor Nammajana 3 Min Read
Share
SHARE

Chitradurga news | nammajana.com |31-5-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಗುರುತಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಮಿಕ ನಿರೀಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜತೆಗೆ ವಸತಿ ಶಾಲೆಹೊರಗೆ (Chitradurga Education) ಪ್ರವೇಶಾತಿ ನೀಡಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾಮಟ್ಟದ ಟಾಸ್ಕ್‍ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕುವಾರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆ ತನ್ನಿ (Chitradurga Education)

ಕಾರ್ಮಿಕ ಅಧಿಕಾರಿಗಳು ತಾಲ್ಲೂಕುವಾರು ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ (Chitradurga Education) ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೂಚನೆ ನೀಡಿದರು.
ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ, ಗ್ಯಾರೇಜ್‍ಗಳಲ್ಲಿ ಬಾಲಕಾರ್ಮಿಕರು ಕಾರ್ಯನಿರ್ವಹಿಸುವ ಸಂಭವ ಹೆಚ್ಚಾಗಿರುವುದರಿಂದ ಕಾರ್ಮಿಕ ನಿರೀಕ್ಷಕರು ನಿಯಮಿತವಾಗಿ ದಾಳಿ ನಡೆಸಿ ತಪಾಸಣೆ ಮಾಡಬೇಕು ಎಂದು ತಿಳಿಸಿದ ಅವರು, ಬಾಲ್ಯಾ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ 764 ಮಕ್ಕಳು ಶಾಲೆಯಿಂದ ಹೊರಗೆ (Chitradurga Education)

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದಿನ್ ಮಾತನಾಡಿ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 764 ಮಕ್ಕಳು (Chitradurga Education) ಶಾಲೆಯಿಂದ ಹೊರಗುಳಿದಿದ್ದು, ಪೋಷಕರ ವಲಸೆ ಕಾರಣದಿಂದಾಗಿ ಮೊಳಕಾಲ್ಮುರು ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚಿನ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದರು.

ಜೂನ್ 12 ಕ್ಕೆ ಬಾಲಕಾರ್ಮಿಕ ವಿರೋಧಿ ಜಾಥಾ (Chitradurga Education)

ಕಾರ್ಮಿಕ ಅಧಿಕಾರಿ ಜಿ.ಬಿ.ಚಂದ್ರಶೇಖರಯ್ಯ ಮಾತನಾಡಿ, 2024ರ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದವರೆಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು. ಜಾಥಾ ಕಾರ್ಯಕ್ರಮದಲ್ಲಿ 400 ಕ್ಕೂ ಶಾಲಾ ಮಕ್ಕಳು ಭಾಗವಹಿಸಲಿದ್ದು, ಜಾಗೃತಿ ಫಲಕಗಳು, ಬ್ಯಾನರ್‍ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು.

ಇದನ್ನೂ ಓದಿ: GTTC: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಮಿಕರ ನಿರೀಕ್ಷಕರು ಸಹ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಬೇಕು ಎಂದು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮಕ್ಕೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲೆಯ ಮತ್ತು ತಾಲ್ಲೂಕುಗಳ, ಗ್ರಾಮ ಮಟ್ಟದ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳವುದಿಲ್ಲವೆಂಬ “ಪ್ರಮಾಣ ವಚನ” ಸ್ವೀಕರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Today Dina Bhavishya: ಇಂದಿನ ರಾಶಿ ಫಲ 31-5-202

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪಾನ್-ಇಂಡಿಯಾ ರೆಸ್ಕ್ಯೂ ಅಂಡ್ ರಿಹ್ಯಾಬಿಲಿಟೇಶನ್ ಕ್ಯಾಂಪೇನ್ ಆಫ್ ಚೈಲ್ಡ್ ಅಂಡ್ ಅಡೋಲ್ಸೆಂಟ್ ರಕ್ಷಣಾ ಕಾರ್ಯಾಚರಣೆ ಪ್ರಯುಕ್ತ 2024ರ ಜೂನ್ 01 ರಿಂದ 30 ರವರೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ (Chitradurga Education) ಕಾರ್ಮಿಕರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ಭಾಗವಹಿಸಿದ್ದವರು

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಭಾರತಿ ಆರ್ ಬಣಕಾರ್, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ತಹಶೀಲ್ದಾರ್ ಡಾ.ನಾಗವೇಣಿ, ಕಾರ್ಮಿಕ ನಿರೀಕ್ಷಕ ರಾಜಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Additional District Collector meetingcall to schoolChitradurgaChitradurga NewsKannada Newskannada suddimeasures to prevent child labourNammajana.comschool dropout meetingಅಪರ ಜಿಲ್ಲಾಧಿಕಾರಿ ಸಭೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಾಲಕಾರ್ಮಿಕ ಪದ್ದತಿ ತಡೆಗೆ ಕ್ರಮಶಾಲೆ ಬಿಟ್ಟ ಮಕ್ಕಳ ಸಭೆಶಾಲೆಗೆ ಕರೆ ತನ್ನಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article GTTC: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Next Article Chitradurga MLC Election: ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ, ಶಿಕ್ಷಕರ ಸಮಸ್ಯೆಗೆ ಸ್ಪಂದಿಸುತ್ತಾರೆ: ಟಿ.ರಘುಮೂರ್ತಿ ಮತಯಾಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?