Chitradurga news | nammajana.com |31-5-2024
ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Chitradurga MLC Election) ಅತ್ಯಂತ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರಿಗೆ ನೀಡುವ ಮೂಲಕ ವಿಧಾನ ಪರಿಷತ್ ನಲ್ಲಿ ನಮ್ಮ ಬಲ ಹೆಚ್ಚಿಸಿದರೆ ಶಿಕ್ಷಕರ ಪರವಾಗಿ ಕೆಲಸ ಮಾಡಲು ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ದುರ್ಗದ ಸಿರಿ ಹೋಟೆಲ್ ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ (Chitradurga MLC Election) ಅಂಗವಾಗಿ ತುರುವನೂರು ಹೋಬಳಿಯ ಪ್ರೌಢಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಡಿ.ಟಿ.ಶ್ರೀನಿವಾಸ್ ಪರ ಮತಯಾಚನೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು ಶಿಕ್ಷಕರ ಪರವಾದ ತಿರ್ಮಾನಗಳನ್ನು ತೆಗೆದುಕೊಳ್ಳಲು ನಾವು ಬದ್ದವಾಗಿದ್ದೇವೆ. ವಿಧಾನ ಸಭೆ ಜೊತೆಗೆ ವಿಧಾನ ಪರಿಷತ್ (Chitradurga MLC Election) ಸಹ ನಮ್ಮ ಬಹುಮತ ಬಂದರೆ ಕಾಯ್ದೆ ಕಾನೂನು ಜಾರಿ ಮಾಡಲು ಅನುಕೂಲವಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದು ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ, ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದ್ದು ಶಿಕ್ಷಕರ ಪರ ವಿಧಾನ ಪರಿಷತ್ ನಲ್ಲಿ (Chitradurga MLC Electಆರು ) ಮಾತನಾಡಿ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಕೆಲಸ ಮಾಡುತ್ತಾರೆ.
ಈ ಬಾರಿ ಅತ್ಯಧಿಕ ಮತಗಳನ್ನು ಡಿ.ಟಿ.ಶ್ರೀನಿವಾಸ್ ಆಯ್ಕೆ ಮಾಡಿದರೇ ನಮ್ಮ ಸರ್ಕಾರ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ಸಹಕಾರಿಯಾಗುತ್ತದೆ.
ನಮ್ಮ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತಮ ಆಡಳಿತ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದಾರೆ. ಜನರು ನೆಮ್ಮದಿಯಿಂದ ಇದ್ದು ಬಿಜೆಪಿ ನಾಯಕರು ಮಾತ್ರ ನಿರಾಸೆಯಿಂದ ಸರ್ಕಾರದ ಮೇಲೆ ಉರುಳಿದ ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿದ್ದು ವಿಧಾನ ಪರಿಷತ್ ಆರು (Chitradurga MLC Election) ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಅಧ್ಯಕ್ಷ ರವಿಕುಮಾರ್, ಮಾಜಿ ಜಿ.ಪಂ.ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ ಮೂರ್ತಿ ಮತ್ತು ಶಿಕ್ಷಕರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252