Chitradurga news |nammajana.com|1-6-2024
ನಮ್ಮಜನ.ಕಾಂ, ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2024-25ನೇ ಸಾಲಿಗೆ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯದಲ್ಲಿ (Adarsh Vidyalaya) ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 3 ರಿಂದ 13 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರವೇಶ ಪರೀಕ್ಷೆಗೆ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ (Adarsh Vidyalaya) ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ). ಅಭಿವೃದ್ಧಿ, ಬಿ.ಇ.ಓ/ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು (Adarsh Vidyalaya) ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
