Chitradurga news | nammajana.com |4-6-2024
ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಅಧಿಕಾರಿಗಳು, ಸಿಬ್ಬಂದಿ ಎಣಿಕೆ ಕೇಂದ್ರದತ್ತ (Counting Center) ಆಗಮಿಸುತ್ತಿದ್ದಾರೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಓಪನ್ ಆಗಿದ್ದು ಅಂಚೆ ಮತ ಎಣಿಕೆ ಶುರವಾಗಬೇಕಿದೆ.
ಗುರುತು ಚೀಟಿ ಇದ್ದವರಷ್ಟೆ ಒಳಗೆ
ಚುನಾವಣೆ ಆಯೋಗದ ಅಧಿಕೃತ ಗುರುತು ಚೀಟಿ ಹೊಂದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ರಾಜಕೀಯ ಪಕ್ಷಗಳ ಎಣಿಕೆ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹೊರತು ಮತ್ಯಾರಿಗು ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಸಹ್ಯಾದ್ರಿ ಕಾಲೇಜು ಗೇಟ್ ಮುಂಭಾಗ ಪೊಲೀಸ್ ಸಿಬ್ಬಂದಿ ಗುರುತು ಚೀಟಿ ಹೊಂದಿರುವವರನ್ನು ಪರಿಶೀಲಿಸಿ ಕೇಂದ್ರದೊಳಗೆ ಬಿಡುತ್ತಿದ್ದಾರೆ.

ಅಭ್ಯರ್ಥಿಗಳಲ್ಲಿ ಹೆಚ್ಚಿದ ಕಾತುರ
ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆಗೆ ಈ ಬಾರಿ ಹಿರಿಯ ನಾಗರಿಕರು ಕೂಡ ಅಂಚೆ ಮತದಾನ ಮಾಡಿದ್ದಾರೆ. ಈ ಮತಗಳತ್ತ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಹೆಚ್ಚು ಗಮನ ವಹಿಸುತ್ತವೆ. ಆಡಳಿತ ಯಂತ್ರ ಯಾರ ಪರ ಒಲವು ಹೊಂದಿದೆ ಅನ್ನುವುದಕ್ಕೆ ಅಂಚೆ ಮತಗಳು ಪ್ರಮುಖ ಪಾತ್ರ ವಹಿಸಲಿವೆ.
ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 4-6-2024
ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸಬಹುದಾಗಿದೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252