Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Pratibha puraskara: ಶಿಕ್ಷಣಕ್ಕೆ ಬಡತನ,‌ ಸಿರಿತನ ತಾರತಮ್ಯವಿಲ್ಲ; ಪಪಂ ಸದಸ್ಯ ಜೆ.ಆರ್.ರವಿಕುಮಾರ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Pratibha puraskara: ಶಿಕ್ಷಣಕ್ಕೆ ಬಡತನ,‌ ಸಿರಿತನ ತಾರತಮ್ಯವಿಲ್ಲ; ಪಪಂ ಸದಸ್ಯ ಜೆ.ಆರ್.ರವಿಕುಮಾರ್
ಇಂದಿನ ಸುದ್ದಿ

Pratibha puraskara: ಶಿಕ್ಷಣಕ್ಕೆ ಬಡತನ,‌ ಸಿರಿತನ ತಾರತಮ್ಯವಿಲ್ಲ; ಪಪಂ ಸದಸ್ಯ ಜೆ.ಆರ್.ರವಿಕುಮಾರ್

Editor Nammajana
Last updated: 11 June 2024 10:27
By Editor Nammajana 2 Min Read
Share
SHARE

Chitradurga news|nammajana.com|11-6-2024

ನಮ್ಮಜನ.ಕಾಂ, ನಾಯಕನಹಟ್ಟಿ: ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ (Pratibha puraskara) ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್ ಹೇಳಿದರು.

ಪಟ್ಟಣದಲ್ಲಿ ಶಾಲಾ ಪರೀಕ್ಷೆ ಮೌಲ್ಯಾಂಕ ಮತ್ತು ನಿರ್ಣಯ ಮಂಡಳಿ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪನವರ ಅಭಿಮಾನಿ ಬಳಗದ ವತಿಯಿಂದ ಮಾದಿಗ ಸಮುದಾಯದ ಎಸ್‍ಎಸ್‍ಎಲ್‍ಸಿ, ಪಿಯುಸಿ ಯಲ್ಲಿ ಶೇ.90ಕ್ಕು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ (Pratibha puraskara) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣಕ್ಕೆ ಬಡತನ, ಸಿರಿತನದ ತಾರತಮ್ಯವಿಲ್ಲ. ಪರಿಶ್ರಮ ಮತ್ತು ಸತತ ಪ್ರಯತ್ನ ಅಗತ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರೊಂದಿಗೆ ಪೋಷಕರ ಸಹಕಾರ ಅಗತ್ಯವಾಗಿದೆ.

ಅದರಲ್ಲೂ ಗ್ರಾಮೀಣ ಭಾಗದಲ್ಲಿ ಮಕ್ಕಳ ಪೋಷಕರ ಅನಕ್ಷರತೆ, ಜೀವನ ನಡೆಸಲು ಕಷ್ಟದ ಪರಿಸ್ಥಿಯಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇಂತಹ ಕೆಲಸವನ್ನು ಮಾಡಬಾರದು. ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ (Pratibha puraskara) ಪ್ರೋತ್ಸಾಹ ನೀಡಬೇಕು ಎಂದರು.

ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚನ್ನಕೇಶವ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು. ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರು.

ಮುಖ್ಯಶಿಕ್ಷಕರಾದ ಎನ್.ಮಹಂತೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮಕ್ಕಳಲ್ಲಿ ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಎರಡೂ ಅತಿ ಮುಖ್ಯ. ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರೆ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ (Pratibha puraskara) ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು

ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಆರ್.ಶ್ರೀಕಾಂತ್, ಮರಿಪಾಲಯ್ಯ, ಮುಖಂಡರಾದ ತಾರಕೇಶ್, ಮಲ್ಲಿಕಾರ್ಜುನ್, ಎಂ.ಅಜಯ್, ರಾಕೇಶ್, ಅಖಿಲೇಶ್ ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsKannada Newskannada suddiLetest NewsNammajana.comNayakanahattyPratibha PuraskarToday newsಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಾಯಕನಹಟ್ಟಿಪ್ರತಿಭಾ ಪುರಸ್ಕಾರಲೆಟೆಸ್ಟ್ ನ್ಯೂಸ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Diploma chitradurga: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
Next Article Equipment for the disabled: ವಿಕಲಚೇತನರಿಗೆ ಸಾಧನ ಸಲಕರಣೆ ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?