Chitradurga news| nammajana.com|13-6-2024
ನಮ್ಮಜನ.ಕಾಂ, ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದ ರೇಣುಕಾಸ್ವಾಮಿ ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೊಳಗಾಗಿದ್ದ ಈಗ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ (Renukaswamy Postmortem Report) ವರದಿಯು ಪೊಲೀಸರ ಕೈ ಸೇರಿದೆ. ಆತನನ್ನು ಬರ್ಬರವಾಗಿ ಕೊಲ್ಲಲಾಗಿದೆ ಎಂದು ವರದಿಯಲ್ಲಿ ನಮೂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೌರಿಂಗ್ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೀಡಿದ್ದಾರೆ. ವರದಿಯಲ್ಲಿ ಮೃತದೇಹದ 15 ಕಡೆಗಳಲ್ಲಿ ಗಾಯಗಳಿದ್ದವು ಎಂದು ದೃಢಪಡಿಸಿದ್ದಾರೆ. ರೇಣುಕಾಸ್ವಾಮಿ ದೇಹದ ಯಾವ ಭಾಗದಲ್ಲಿ ರಕ್ತ ಬಂದಿತ್ತು? ಎಲ್ಲೆಲ್ಲಿ ಗಾಯಗಳಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಅದರಲ್ಲೂ ದರ್ಶನ್ ಅವರು ಮರ್ಮಾಂಗಕ್ಕೆ ಹೊಡೆದಿದ್ದರಿಂದಲೇ ಆತನ ಪ್ರಾಣ ಹೋಗಿದೆ ಎಂದು ಹೇಳಲಾಗಿದೆ. ಆದರೆ, ದರ್ಶನ್ ಕಡೆಗಿನ ವಾದದಲ್ಲಿ ದರ್ಶನ್ ಹೊಡೆದಿದ್ದರಿಂದ ಆತ ಸತ್ತಿಲ್ಲ ಎನ್ನಲಾಗುತ್ತಿದೆ.
ಈ ಎಲ್ಲಾ ಕಾರಣಗಳಿಗಾಗಿ, ರೇಣುಕಾ ಸ್ವಾಮಿಯವರ (Renukaswamy Postmortem Report) ಮರಣೋತ್ತರ ವರದಿಗಾಗಿ ಪೊಲೀಸರು ಕಾಯುತ್ತಿದ್ದರು. ಅದು ಈಗ ಬಿಡುಗಡೆಯಾಗಿದೆ. ಮರ್ಮಾಂಗಕ್ಕೆ ಬಿದ್ದ ಪೆಟ್ಟು ಹಾಗೂ ಅದರಿಂದಾದ ರಕ್ತಸ್ರಾವದಿಂದಲೇ ಆತ ಸಾವಿಗೀಡಾಗಿರುವ ಬಗ್ಗೆ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ದರ್ಶನ್ ವಿರುದ್ಧದ ಸಾಕ್ಷ್ಯಾಧಾರಗಳಿಗೆ ಮತ್ತಷ್ಟು ಪುಷ್ಠಿ ನೀಡುವ ಸಾಧ್ಯತೆಗಳಿವೆ.
ಅಲ್ಲದೇ, ಹೊಟ್ಟೆ ಭಾಗದಲ್ಲಿಯೂ ರಕ್ತ ಸೋರಿಕೆಯಾಗಿದೆ. ತಲೆಗೂ ಬಲವಾದ ಪೆಟ್ಟು ಬಿದ್ದಿದೆ. ಆದರೆ, ರಕ್ತ ಸೋರಿಕೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: Rice Auction Chitradurga: ಜಪ್ತಿ ಮಾಡಿಕೊಂಡ ಅಕ್ಕಿ ಬಹಿರಂಗ ಹರಾಜು, ಮುಂಗಡ ಹಣ ಕಟ್ಟಿ ಹರಾಜು ನೊಂದಣಿ
ಕೈ ಮತ್ತು ಕಾಲುಗಳಲ್ಲಿ, ಬೆನ್ನು ಹಾಗೂ ಎದೆ ಭಾಗದಲ್ಲೂ ರಕ್ತ ಬಂದಿದೆ. ತೀವ್ರ ಹಲ್ಲೆಯಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಮರದ ಪೀಸ್, ಬೆಲ್ಟ್ ಬಳಸಿ ಹಲ್ಲೆ ಮಾಡಲಾಗಿದ್ದು, ದೇಹದಲ್ಲಿ 15 ಕಡೆ ಗಾಯಗಳಾಗಿವೆ. ಮೃತದೇಹದ ಮುಖ ಮತ್ತು ದವಡೆ ಭಾಗವನ್ನು ನಾಯಿಗಳು ಕಿತ್ತು ತಿಂದಿರುವುದು ಮರಣೋತ್ತರ ಪರೀಕ್ಷೆಯಲ್ಲಿ (Renukaswamy Postmortem Report) ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252