Chitradurga news|nammajana.com|19-6-2024
ನಮ್ಮಜನ.ಕಾಂ, ಚಿತ್ರದುರ್ಗ: ವಿಜ್ಞಾನ ಪರಿಕರಗಳನ್ನು (Chitradurga education news) ಬಳಕೆ ಮಾಡಿಕೊಂಡು ಪ್ರಾಯೋಗಿಕವಾಗಿ ಮಕ್ಕಳಿಗೆ ಬೋಧಿಸಿದಾಗ ವಿಜ್ಞಾನದ ಬಗ್ಗೆ ಒಲವು ಹೆಚ್ಚಾಗಿ ಸಂಶೋಧನೆಗೆ ನೆರವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಶಿಕ್ಷಕರುಗಳಿಗೆ ಕರೆ ನೀಡಿದರು.
ಐ.ಎಲ್.ಪಿ. ಹಾಗೂ ಎಲುಷಿಯನ್ ಮತ್ತು ಸಿ.ಎಸ್.ಆರ್. ಪಾಲುದಾರಿಕೆಯಲ್ಲಿ ಸರ್ಕಾರಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಬಿ.ಆರ್.ಸಿ.ಕೇಂದ್ರದಲ್ಲಿ ತಾಲ್ಲೂಕಿನ ಇನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ವಿಜ್ಞಾನ ಶಿಕ್ಷಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ವಿಜ್ಞಾನ ಕಿಟ್‍ಗಳನ್ನು (Chitradurga education news) ವಿತರಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹಾಗೂ ದಾಖಲಾತಿ ಕಡಿಮೆಯಿದೆ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಸರ್ಕಾರಿ ಶಾಲೆಯ ಶಿಕ್ಷಕರುಗಳು ಮೂರು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ನೇಮಕಗೊಳ್ಳುತ್ತಾರೆ. ಹಾಗಾಗಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಬೋಧನೆ ಮಕ್ಕಳಿಗೆ ಸಿಗುತ್ತಿದೆ. ಇದರ ಜೊತೆ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ವಿಜ್ಞಾನವನ್ನು ಪ್ರಾಯೋಗಿಕವಾಗಿ ಮಕ್ಕಳಿಗೆ ಮನ ಮುಟ್ಟುವಂತೆ ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು.
ವೈಜ್ಞಾನಿಕ ಮನೋಭಾವನೆ ಮಕ್ಕಳಲ್ಲಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ. ವಿಜ್ಞಾನ ಪರಿಕರಗಳು ಉತ್ಕøಷ್ಠ ರೀತಿಯಲ್ಲಿ ಬಳಕೆಯಾಗಬೇಕು. ಇದರಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಇಸ್ರೋ, ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್‍ನಲ್ಲಿ ವಿಜ್ಞಾನಿಗಳಾಗಬಹುದು. ಈ ನಿಟ್ಟಿನಲ್ಲಿ ಶಿಕ್ಷಕರುಗಳ ಪಾತ್ರ ದೊಡ್ಡದು ಎಂದು ತಿಳಿಸಿದರು.
ಇದನ್ನೂ ಓದಿ: Halurameshwar: ಹಾಲುರಾಮೇಶ್ವರ ಕ್ಷೇತ್ರದಲ್ಲಿ ಹುಂಡಿ ಹಣ ಕಳವು, ಅರ್ಚಕರ ಏನೇಳ್ತರೇ?
ಸರ್ಕಾರಿ ಶಾಲೆಗೆ ಸೇರುವ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ವಿಜ್ಞಾನವನ್ನು ಪರಿಣಾಮಕಾರಿಯಾಗಿ ಬೋಧಿಸಿದರೆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು.
ಐ.ಎಲ್.ಪಿ. ಪ್ರಾಜೆಕ್ಟ್ ಮ್ಯಾನೇಜರ್ ಮಂಜುನಾಥ್ ಬೆಸ್ತರ್ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸಿ ಪ್ರಾಯೋಗಿಕ ಚಟುವಟಿಕೆಗಳಿಗೆ ವಿಜ್ಞಾನ ಕಿಟ್‍ಗಳು (Chitradurga education news) ಪ್ರಯೋಜನಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಇಂತಹ ಸೌಲಭ್ಯಗಳು ಕಡಿಮೆಯಿರುವುದರಿಂದ ಐ.ಎಲ್.ಪಿ. ಮತ್ತು ಎಲುಷಿಯನ್ ಸಂಸ್ಥೆಗಳು ನೀಡುವ ವಿಜ್ಞಾನ ಕಿಟ್‍ಗಳನ್ನು ಬಳಸಿಕೊಂಡು 6 ರಿಂದ 10 ನೇ ತರಗತಿಯ ಮಕ್ಕಳಿಗೆ ಪಠ್ಯಪುಸ್ತಗಳಲ್ಲಿನ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಬೋಧಿಸಬಹುದು ಎಂದು ತಿಳಿಸಿದರು.
ಇದನ್ನೂ ಓದಿ: Sanehalli: ಮಠಾಧೀಶರಿಗಾಗಿ ಜುಲೈ 1 ರಿಂದ ವಚನ ಕಮ್ಮಟ
ಬಿ.ಆರ್.ಸಿ. ಸಂಪತ್‍ಕುಮಾರ್, ಐ.ಎಲ್.ಪಿ. ಪ್ರೋಗ್ರಾಮ್ ಮ್ಯಾನೇಜರ್ ಹರೀಶ್ ಕೆ. ಎಲುಷಿಯಾನ ಹಿರಿಯ ವ್ಯವಸ್ಥಾಪಕ ಶರತ್‍ಕುಮಾರ್, ಎಲುಷಿಯಾನ ಮಾಹಿತಿ ತಂತ್ರಜ್ಞಾನ ನಿರ್ದೇಶಕ ದಿವಾಕರಗುಪ್ತ ವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252