Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಲ್ಮೀಕಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಪಟ್ಟು |Valmiki Corporation Scam | BJP Protest Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ವಾಲ್ಮೀಕಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಪಟ್ಟು |Valmiki Corporation Scam | BJP Protest Chitradurga
ರಾಜಕೀಯ

ವಾಲ್ಮೀಕಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಪಟ್ಟು |Valmiki Corporation Scam | BJP Protest Chitradurga

Editor Nammajana
Last updated: 28 June 2024 10:48
By Editor Nammajana 2 Min Read
Share
SHARE

Chitradurga news|nammajana.com|28-6-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಇತಿಹಾಸದಲ್ಲಿಯೇ ಕಂಡರಿಯಂದಂತ ಭ್ರಷ್ಠಾಚಾರದಲ್ಲಿ ತೊಡಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ (Valmiki Corporation Scam) ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಉಚಿತ ಗ್ಯಾರೆಂಟಿಗಳಿಗೆ ಹಣ ಸಾಕಾಗದ ಕಾರಣ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ಬಳಸಿಕೊಂಡಿದೆ. ಬೇನಾಮಿ ಖಾತೆಗಳನ್ನು ತೆರೆದು 187 ಕೋಟಿ ರೂ.ಗಳನ್ನು ವರ್ಗಾಯಿಸಿ ಅಲ್ಲಿಂದ ರಾಜ್ಯ ಸರ್ಕಾರ ಬೇರೆ ಬೇರೆ ಉದ್ದೇಶಗಳಿಗೆ ಖರ್ಚು ಮಾಡಿ ನೆರೆಯ ಆಂಧ್ರಕ್ಕೆ ಹಣ ರವಾನಿಸಿದೆ ಎಂದು ಆಪಾದಿಸಿದರು.

ಬಾರ್‍ನಲ್ಲಿ ಕುಳಿತು ಕುಡಿಯುವವರಿಗೂ ಹಣ ತಲುಪಿದೆ. ಇಂತಹ ಕಡು ಭ್ರಷ್ಟ ಸರ್ಕಾರಕ್ಕೆ ಕಿವಿ ಹಿಂಡಬೇಕಿದೆ ಎಂದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ (Valmiki Corporation Scam) ನಿಗಮಕ್ಕೆ ನೂರಾರು ಕೋಟಿ ರೂ.ಗಳನ್ನು ನೀಡಿದ್ದರು. ಆ ಹಣವನ್ನೆಲ್ಲಾ ಈಗಿನ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಎಸ್.ಐ.ಟಿ. ತನಿಖೆ ನಡೆಸುತ್ತಿದೆಯೇ ವಿನಃ ಸಚಿವ ನಾಗೇಂದ್ರಗೆ ಇದುವರೆವಿಗೂ ಒಂದು ನೋಟಿಸ್ ಕೊಟ್ಟಿಲ್ಲ. ಬೇರೆ ಬೇರೆ ರಾಜ್ಯಗಳಿಗೆ, ರಾಹುಲ್‍ಗಾಂಧಿಗೆ ಹಣ ಹೋಗಿದೆ. ಕರ್ನಾಟಕವನ್ನು ಎಟಿಎಂ. ಮಾಡಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಚಿತ ಗ್ಯಾರೆಂಟಿಗಳಿಗೆ ಹಣ ಒದಗಿಸಲು ಹೆಣಗಾಡುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಕೂಡ ಹಗರಣದಲ್ಲಿ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಬರಗಾಲವಿದೆ. ರೈತರು ಕಂಗಾಲಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ (Valmiki Corporation Scam) ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್‍ನೋಟ್‍ನಲ್ಲಿ ಸಚಿವರ ಹೆಸರು ಬರೆದಿದ್ದಾರೆ. ಎಸ್ಸಿ.ಪಿ. ಟಿಎಸ್ಸ್‍ಪಿ. ಹಣ ದುರುಪಯೋಗವಾಗಿದೆ. ಈ ನಿಟ್ಟಿನಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇರ್ಲಗುಂಟೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಾಲ್ಮೀಕಿ ಜನಾಂಗದ ಹಣವೇ ಬೇಕಿತ್ತ. 187 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ (Valmiki Corporation Scam) ಮಾಡಿಸಿಕೊಂಡು ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ರಾಜಿನಾಮೆ ಕೊಡಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.

ಇದನ್ನೂ ಓದಿ: ಅನೈತಿಕ ಸಂಬಂಧ | ಗಂಡನ ಕೊಲ್ಲಲು ರಾಗಿ ಮುದ್ದೆಯಲ್ಲಿ ವಿಷ ಹಾಕಿದ ಪತ್ನಿ | Attempted murder

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ. ಎಸ್ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿ ಶರಣ್‍ತಾಳಿಕೆರೆ, ಎಸ್.ಲಿಂಗಮೂರ್ತಿ, ಉಮೇಶ್‍ಕಾರಜೋಳ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಹನುಮಂತೆಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಯುವ ಮುಖಂಡರುಗಳಾದ ಎಂ.ಸಿ.ರಘುಚಂದನ್, ಕುಮಾರಸ್ವಾಮಿ, ಜಿ.ಎಸ್.ಅನಿತ್‍ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಡಾ.ಸಿದ್ದಾರ್ಥ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಧುರಿ ಗಿರೀಶ್, ಜಿ.ಟಿ.ಸುರೇಸ್‍ಸಿದ್ದಾಪರ, ಪಿ.ಸಂಪತ್‍ಕುಮಾರ್, ಬಾಳೆಕಾಯಿ ರಾಂದಾಸ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:BangaloreBangaru HanumanthuBJP protestBJP State PresidentBJP WorkersBY VijayendraChitradurgaChitradurga NewsFormer MLAsGH TippareddyKannada Newskannada suddiKT KumaraswamyLeaderM. ChandrappaMinister B NagendraMLAsNammajana.comNayak SamajS. ThippeswamyscamValmiki CorporationValmiki Development CorporationValmiki Samajಎಂ.ಚಂದ್ರಪ್ಪಎಸ್.ತಿಪ್ಪೇಸ್ವಾಮಿಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಟಿ.ಕುಮಾರಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿ.ಹೆಚ್.ತಿಪ್ಪಾರೆಡ್ಡಿನಮ್ಮಜನ.ಕಾಂ​​ನಾಯಕ ಸಮಾಜಬಂಗಾರು ಹನುಮಂತುಬಿ.ವೈ.ವಿಜಯೇಂದ್ರಬಿಜೆಪಿ ಕಾರ್ಯಕರ್ತರುಬಿಜೆಪಿ ಪ್ರತಿಭಟನೆಬಿಜೆಪಿ ರಾಜ್ಯಧ್ಯಕ್ಷಬೆಂಗಳೂರುಮಾಜಿ ಶಾಸಕರುಮುಖಂಡರುವಾಲ್ಮೀಕಿ ಅಭಿವೃದ್ದಿ ನಿಗಮವಾಲ್ಮೀಕಿ ನಿಗಮವಾಲ್ಮೀಕಿ ಸಮಾಜಶಾಸಕರುಸಚಿವ ಬಿ ನಾಗೇಂದ್ರಹಗರಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ಅನೈತಿಕ ಸಂಬಂಧ | ಗಂಡನ ಕೊಲ್ಲಲು ರಾಗಿ ಮುದ್ದೆಯಲ್ಲಿ ವಿಷ ಹಾಕಿದ ಪತ್ನಿ | Attempted murder
Next Article ತೋಟಗಾರಿಕೆ ಇಲಾಖೆ: ಸಹಾಯಧನಕ್ಕೆ ಅರ್ಜಿ ಆಹ್ವಾನ | Gardening facility
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?