Chitradurga news|nammajana.com|28-6-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (Social Welfare Department Chitradurga)ಹೊಸದಾಗಿ ಪ್ರವೇಶಾತಿ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಮ್ಯಾನುಯಲ್ ಮತ್ತು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಂಬಂಧಪಟ್ಟ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಮ್ಯಾನುಯಲ್ ಅರ್ಜಿಯನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಲು ಸೂಚಿಸಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ದಾಖಲಾಗಲು ಬೇಕಾಗುವ ದಾಖಲೆಗಳು:
ವಿದ್ಯಾರ್ಥಿಯ ಸ್ಯಾಟ್ಸ್ (SATs) ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ ಈ ಎಲ್ಲಾ ದಾಖೆಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಎನ್‍ಪಿಸಿಐ ನಲ್ಲಿ ಆಧಾರ್ ಜೋಡಣೆ ಮಾಡಿರಬೇಕು (Social Welfare Department Chitradurga)ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ದಾಖಲಾಗಲು ಬೇಕಾಗುವ ದಾಖಲೆಗಳು:
ವಿದ್ಯಾರ್ಥಿಯ ಕಾಲೇಜು ದಾಖಲಾತಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ದೂರದ ಪ್ರಯಾಣ ಪತ್ರ (ಕಿಲೋಮೀಟರ್ ಸರ್ಟಿಫಿಕೇಟ್), ಈ ಎಲ್ಲಾ ದಾಖೆಲೆಗಳ ಜೆರಾಕ್ಸ್ ಪ್ರತಿಗಳು, ( ಎಸ್‍ಎಸ್‍ಪಿ ವಿವರಗಳು ಹಾಗೂ ಇತರೆ ದಾಖಲೆಗಳು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. (Social Welfare Department Chitradurga)
ಇದನ್ನೂ ಓದಿ: ಮೆಟ್ರಿಕ್ ಪೂರ್ವ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್ ಅವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ (Social Welfare Department Chitradurga)ತಿಳಿಸಿದ್ದಾರೆ.