Chitradurga news|nammajana.com|2-7-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ (SSLC Result Improvement) ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ (SSLC Result Improvement) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

2022-23ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, 2023-24ನೇ ಸಾಲಿನಲ್ಲಿ 21ನೇ ಸ್ಥಾನಕ್ಕೆ ಕುಸಿದಿದ್ದು, ಈ ಫಲಿತಾಂಶ ಕುಸಿತಕ್ಕೆ ಕಾರಣವೇನು ಎಂದು ಪ್ರಶ್ನೆ ಮಾಡಿದ ಅವರು, 2024-25 ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದ (SSLC Result Improvement) ಪ್ರಾರಂಭದಲ್ಲೇ ಶಾಲಾ ಹಂತ, ಹೋಬಳಿ ಹಂತ, ತಾಲ್ಲೂಕು ಹಂತ ಮತ್ತು ಜಿಲ್ಲಾ ಹಂತಗಳಲ್ಲಿ ಫಲಿತಾಂಶ ವೃದ್ಧಿಗಾಗಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಮದಕರಿನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ನಮ್ಮ ಸರ್ಕಾರದಿಂದ ಸಂಪೂರ್ಣ ಸಹಕಾರ: ಟಿ.ರಘುಮೂರ್ತಿ | Madakarinayaka Theme Park
ವಿದ್ಯಾರ್ಥಿಗಳಿಗೆ ಮನಮುಟ್ಟುವ ಹಾಗೆ ಮಾರ್ಗದರ್ಶನ ನೀಡಿ. ಅದರಲ್ಲೂ ಶಾಲಾ ಹಂತದಲ್ಲಿ ವಿಷಯವಾರು ಶಿಕ್ಷಕರ (SSLC Result Improvement) ಮೇಲ್ವಿಚಾರಣೆ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಎಲ್ಲಾ ಅಧಿಕಾರಿಗಳು ಮತ್ತು ಶಿಕ್ಷಕರು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸಿರುದ್ದೀನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪಮನಿರ್ದೇಶಕ ಪುಟ್ಟಸ್ವಾಮಿ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252