Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ (BCM Hostel Chitradurga) ವಿದ್ಯಾರ್ಥಿನಿಲಯಕ್ಕೆ ಸೋಮವಾರದಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸದಸ್ಯ ಎಸ್.ಕೆ.ವಂಟಿಗೊಡಿ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ನಿಲಯದಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಉಟೋಪಚಾರದ ಬಗ್ಗೆ ಮಾಹಿತಿ (BCM Hostel Chitradurga) ಪಡೆದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಲಯದ ಸೌಲಭ್ಯಗಳು ಹಾಗೂ ಊಟ ಮತ್ತು ಇತರೆ ಸೌಲಭ್ಯ ಉತ್ತಮವಾಗಿದೆ ಎಂದು ತಿಳಿಸಿದರು.
ಸರ್ಕಾರ ನೀಡುತ್ತಿರುವ ಅವಕಾಶಗಳನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು. ಹಾಲಿ ವ್ಯಾಸಂಗ ಮಾಡುತ್ತಿರುವ ತರಗತಿಗಳ (BCM Hostel Chitradurga) ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಮಟ್ಟದಲ್ಲಿ ತಯಾರಾಗಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ ಜಾಗೃತಿ ಮೂಡಿಸಲು ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ನಿಲಯದ ಸ್ವಚ್ಛತೆ, ವಿದ್ಯಾರ್ಥಿಗಳ ವ್ಯಾಸಂಗ, ವಿದ್ಯಾರ್ಥಿಗಳ ಆರೋಗ್ಯ, ನಿಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಿದರು. ನಿಲಯದ ಅಡುಗೆ ಮನೆ. ಉಗ್ರಾಣ ಮತ್ತು ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿ ನಿಲಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಆರೋಗ್ಯಕರ ಆಹಾರ ಯೋಜನೆಯನ್ನು ನಾನು ಹೇಗೆ ಅನುಸರಿಸಬಹುದು ನೀವು ಓದಿ |Health advice
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ಕೆ.ನಾಗವೇಣಿ. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ಮತ್ತಿತರರು (BCM Hostel Chitradurga) ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.