chitradurga news | nammajana.com | 4-7-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು (Application for Disability Facility) ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಜಿಲ್ಲೆಯ ವಿಕಲಚೇತನರು (ಅಂಗವಿಕಲರು) ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.ಇದೇ ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಫಲಾನುಭವಿ ಆಧಾರಿತ ಯೋಜನೆಗಳು: (Application for Disability Facility)
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ (ಎಂ.ಆರ್.ಡಬ್ಲ್ಯೂ ಮತ್ತು ವಿಆರ್ಡಬ್ಲ್ಯೂ) ಸಾಧನೆ ಯೋಜನೆ, ಪ್ರತಿಭೆ ಯೋಜನೆ, (Application for Disability Facility) ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಠದೋಷ ಹೊಂದಿರುವ ವಿಕಲಚೇನರಿಗೆ ಬ್ರೈಲ್ ಕಿಟ್ ಯೋಜನೆ ಸೇರಿದಂತೆ ಒಟ್ಟು 13 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: New Ration card | ಹೊಸ ರೇಷನ್ ಕಾರ್ಡ್ ಗೆ ಸರ್ವರ್ ಸಮಸ್ಯೆ | ಜನರ ಪರದಾಟಪರದಾಟ
ಅರ್ಹ ಫಲಾನುಭವಿಗಳು ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಕೇಂದ್ರಗಳಲ್ಲಿ hhttps://sevasindhu.karnataka.gov.in/sevasindhu/departmentserviceskannada ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (Application for Disability Facility) ಅರ್ಜಿ ಸಲ್ಲಿಸಿದ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ, ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ, ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. (Application for Disability Facility)
ನಗರದ ಸ್ಟೇಡಿಯಂ ಹತ್ತಿರದ ಬಾಲಭವನ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-235284 ಹಾಗೂ ತಾಲ್ಲೂಕು ವಾರು ಎಂ.ಆರ್.ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ – 9880821934, ಚಳ್ಳಕೆರೆ – 9611266930, ಹಿರಿಯೂರು – 9902888901, 9902898901, ಹೊಳಲ್ಕೆರೆ – 9740030227, ಹೊಸದುರ್ಗ -9741829990, ಮೊಳಕಾಲ್ಮೂರು -9742725576 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು (Application for Disability Facility) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.