ಗ್ರಾಮೀಣ ಭಾಗದ ಜ್ವಲಂತ ಸಮಸ್ಯೆಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜನಸ್ಪಂದನ : ಶಾಸಕ ರಘುಮೂರ್ತಿ.
Chitradurga news|nammajana.com|4-7-2024
ನಮ್ಮಜನ.ಕಾಂ, ಚಳ್ಳಕೆರೆ: ನಗರಸಭೆ ಸದಸ್ಯರು ತುರ್ತಾಗಿ ಸಭೆ ಕರೆಯುವಂತೆ ಮನವಿ ಮಾಡಿದರು. ಪರಶುರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಜಮೀನಿಗೆ ರಸ್ತೆ, ನಿವೇಶನ ಮನೆ ನಿರ್ಮಾಣ, ಚೆಕ್‌ಡ್ಯಾಂ ನಿರ್ಮಾಣ, ಖಾತೆ ಬದಲಾವಣೆ, ಸ್ಮಶಾನ ನಿರ್ಮಾಣ, ಕಾಲುವೇಹಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ನಡೆದ ಜನಸ್ಪಂದನ ಸಭೆಯಲ್ಲಿ ಮನವಿ (Jana Spandana Sabha Challakere) ಮಾಡಲಾಗಿತ್ತು.
ಪ್ರಾರಂಭದಲ್ಲೇ ಜನಸ್ಪಂದನಾ ಸಭೆಯ ಉದ್ದೇಶವನ್ನು ತಿಳಿಸಿದ ಜಿಲ್ಲಾಧಿಕಾರಿ ವೆಂಕಟೇಶ್ ಸರ್ಕಾರ ಜನರ ಆಶಯಗಳಿಗೆ ತಕ್ಕಂತೆ ಹಲವಾರು ಯೋಜನೆ ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ನೆರವಾಗುವ ನಿಟ್ಟಿನಲ್ಲಿ (Jana Spandana Sabha Challakere) ಕಾರ್ಯನಿರ್ವಹಿಸುತ್ತಿದೆ. ಕೆಲ ಸಂದರ್ಭದಲ್ಲಿ ಮಾತ್ರ ಯಾವುದೇ ಸರ್ಕಾರಿ ಯೋಜನೆಗಳು ಜನರನ್ನು ತಲುಪುವಲ್ಲಿ ಸಾಧ್ಯವಾಗದೆ ಸರ್ಕಾರದ ಮೂಲ ಉದ್ದೇಶ ಈಡೇರಿದಂತೆಯಾಗುವುದಿಲ್ಲ. ಸಭೆಯಲ್ಲಿ ಸಾರ್ವಜನಿಕರ ಹಲವಾರು ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರ್ಯವನ್ನು ಜಿಲ್ಲಾಡಳಿತ ಪ್ರಾಮಾಣಿಕವಾಗಿ ಮಾಡಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್, ಗ್ರಾಮೀಣ ಭಾಗದ ಹಲವಾರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಇಂತಹ ಜನಸಂಪರ್ಕ ಸಭೆ ಜಿಲ್ಲಾಡಳಿತ ಮತ್ತು ಜನರ ನಡುವಿನ ಸೇತುವೆಯಾಗಿ (Jana Spandana Sabha Challakere) ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಲಿಖಿತ ಮೂಲಕ ನೀಡಿದ್ದಲ್ಲಿ ಅವುಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡಿದಂತಾಗುತ್ತದೆ. ಜಿಲ್ಲೆಯಾದ್ಯಂತ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಮಾನವ ದಿನಗಳ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಇಂದಿನ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಣಿರ್ವಹಣಾಧಿಕಾರಿಗಳು ಆಗಮಿಸಿ ಜನಸ್ಪಂದನಾ ಕಾರ್ಯಕ್ರಮದ ಮೂಲ ಉದ್ದೇಶಗಳ ಬಗ್ಗೆ ತಿಳಿಸಿ ಜನರಲ್ಲಿ ವಿಶ್ವಾಸ ಮೂಡಿಸುವಲ್ಲಿ ಸಫಲರಾಗಿದ್ಧಾರೆ.
ಈ ಕ್ಷೇತ್ರದ ಶಾಸಕನಾಗಿ ಸಾಕಷ್ಟು ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರವನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಕೊಡಿಸುವ ಕಾರ್ಯ ಮಾಡಿದ್ದೇನೆ. ಕೆಲವೊಂದು ವಿಚಾರಗಳು ಜಿಲ್ಲಾಮಟ್ಟದ ಅಧಿಕಾರಿಗಳ (Jana Spandana Sabha Challakere) ಗಮನಕ್ಕೆ ತಂದು ಪರಿಹರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದಾರೆ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸರ್ಕಾರಕ್ಕೆ ನೀಡುವ ಮನವಿ ಹಾಗೂ ಇನ್ನಿತರೆ ವಿಚಾರಗಳ ಬಗ್ಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನಸ್ಪಂದನಾ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು, ಕೇವಲ ಜನರನ್ನು ಸೇರಿಸಿ ಭಾಷಣ ಮಾಡದೆ ಸಭೆಯಲ್ಲಿ ವ್ಯಕ್ತವಾಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜನಸ್ಪಂದನಾ ಒಂದು ಉತ್ತಮ ಹೆಜ್ಜೆ ಎಂದರು.
ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort
ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಯೋಜನಾಧಿಕಾರಿ ಮಹೇಂದ್ರಕುಮಾರ್, ತಹಶೀಲ್ಧಾರ್ ರೇಹಾನ್‌ಪಾಷ, ಇಒ ಶಶಿಧರ, ಬಿಇಒ ಕೆ.ಎಸ್.ಸುರೇಶ್, ಕೃಷಿಅಧಿಕಾರಿ ಅಶೋಕ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಡಿವೈಎಸ್ಪಿ ರಾಜಣ್ಣ, ಪೌರಾಯುಕ್ತ ಸಿ.ಚಂದ್ರಪ್ಪ, ಎಇಇ ದಯಾನಂದ, ಎನ್.ಕಾವ್ಯ, ವಿಜಯಭಾಸ್ಕರ, ನಾಮಿನಿ ಸದಸ್ಯರಾದ ಅನ್ವರ್‌ಮಾಸ್ಟರ್, ನೇತಾಜಿಪ್ರಸನ್ನ, ಬಡಗಿಪಾಪಣ್ಣ, ಭದ್ರಿ, ನಟರಾಜ್ ಮುಂತಾದವರು ಉಪಸ್ಥಿತರಿದ್ದರು.