
Chitradurga news|nammajana.com|14-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದರ್ಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜೊಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಕನ್ನಡಪ್ರಭ ಹಾಗೂ ಏಷ್ಯಾ ನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ (Ravi Hegde) ದಿಕ್ಸೂಚಿ ಭಾಷಣ ಮಾಡಿ, ಪ್ರಸಕ್ತ ಸಮಾಜದಲ್ಲಿ ಮಾಧ್ಯಮ ಎನ್ನುವುದು ಭ್ರಷ್ಟಾಚಾರ ಮಾಡಲು ಸಲಕರಣೆಯಾಗಿ ಬಳಕೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರು ನಮ್ಮ ನಡುವೆಯೇ ಇದ್ದಾರೆ. ಇಂತಹವರನ್ನು ಹುಡುಕಿ ಸಮಾಜದ ಎದುರು (Ravi Hegde) ಬಯಲು ಮಾಡಬೇಕು ಎಂದರು. ಜುಲೈ ಒಂದನೇ ತಾರೀಖನ್ನು ಪತ್ರಿಕಾ ದಿನಾಚರಣೆ ಎನ್ನುವ ಬದಲು ಮಾಧ್ಯಮ ದಿನಾಚರಣೆ ಎಂದು ಕರೆದರೆ ಹೆಚ್ಚು ಅರ್ಥಪೂರ್ಣ ಎನಿಸುತ್ತದೆ.

ಪತ್ರಿಕಾ ದಿನಾಚರಣೆಯನ್ನು ಮಾಧ್ಯಮ ದಿನಾಚರಣೆ ಎನ್ನಬಹುದು
ಮೊದಲ ಪತ್ರಿಕೆ ಪ್ರಾರಂಭವಾದ ದಿನಗಳಲ್ಲಿ ಮುದ್ರಣ ಮಾಧ್ಯಮ ಅಸ್ತಿತ್ವದಲ್ಲಿತ್ತು.ಆದರೆ ಈಗ ಟಿ.ವಿ. ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮವೂ ಕೂಡ ಅಸ್ತಿತ್ವದಲ್ಲಿರುವುದರಿಂದ, ಮಾಧ್ಯಮ ದಿನಾಚರಣೆ ಎನ್ನುವುದು ಸೂಕ್ತ. ಈ ದಿನವನ್ನು ಆತ್ಮಾವಲೋಕ ದಿನವಾಗಿ ಆಚರಿಸಬೇಕು. ವೃತ್ತಿಪರತೆಯನ್ನು ಅಳವಡಿಸಕೊಳ್ಳುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ತರಲು ಪ್ರಯತ್ನಿಸಬೇಕು ಎಂದರು.
ಇದನ್ನೂ ಓದಿ: Patrika dinacarane: ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ: ಸಚಿವ ಡಿ.ಸುಧಾಕರ್
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ
ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ. ಭ್ರಷ್ಟಾಚಾರಾದ ಕುರಿತು ಪ್ರಕಟವಾದ ಸುದ್ದಿಗಳಿಗಿಂತ, ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಯೋಚಿಸುವ ಅನಿವಾರ್ಯತೆಯಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರನ್ನು ಖಂಡಿಸಬೇಕು. ಪತ್ರಕರ್ತರ ಸಂಘಗಳು ಇಂತಹವರಿಗೆ ಮನ್ನಣೆ ನೀಡಬಾರದು ಎಂದು ರವಿ ಹೆಗಡೆ ಹೇಳಿದರು.
ಸರ್ಕಾರಗಳನ್ನು ಸರಿದಾರಿಗೆ ತರುವ ಶಕ್ತಿ ಮಾಧ್ಯಮಗಳಿಗಿದೆ. ಹಗರಣಗಳನ್ನು ಬಯಲಿಗೆ ಎಳೆಯುವ ಮೂಲಕ ಭ್ರಷ್ಟಾಚಾರನ್ನು ತಡೆಗಟ್ಟಬಹುದು. ರಾಜ್ಯದಲ್ಲಿ ನಡೆದ ಪಿ.ಎಸ್.ಐ ನೇಮಕಾತಿ ಹಗರಣವನ್ನು ಮಾಧ್ಯಮಗಳು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದವು. ಇದರಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನವಾಯಿತು ಎಂದರು.
