
Chitradurga news|nammajana.com|20-7-2024
ಮುಖ್ಯಾಂಶಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆ ಭರ್ತಿ
- ಸಹಾಯಕಿಯರ ಹುದ್ದೆ ಭರ್ತಿ
- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕ್ರಮ
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಲಿ ಇರುವ (Anganwadi Vacancy) ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ (Anganwadi Vacancy) ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಅಂಗನವಾಡಿಗಳನ್ನು ನಡೆಸಬಾರದು. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. (Anganwadi Vacancy) ಅಂಗನವಾಡಿಗಳ ಸ್ಥಿತಿಗತಿ ಪರಿಶೀಲಿಸಿ ವರದಿ ಸಲ್ಲಿಸಲು ಉಪವಿಭಾಗಧಿಕಾರಿಗಳು ಹಾಗೂ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಲಾಗಿದೆ.
ನಿವೇಶನ ಲಭ್ಯವಿರುವ ಸ್ಥಳಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕುರಿತು ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸಬೇಕು.(Anganwadi Vacancy) ಅಂಗನವಾಡಿ ಸ್ಥಿತಿಗತಿಗಳ ಕುರಿತು ಪ್ರತ್ಯೇಕವಾಗಿ ಸಭೆ ಕರೆಯವಂತೆ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಅಂಗನವಾಡಿ ಹುದ್ದೆಗಳ ಭರ್ತಿಗೆ ಕ್ರಮ
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 20 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಸಹಾಯಕಿಯರ (Anganwadi Vacancy) ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಹೇಳಿದರು.
ಸಭೆಯಲ್ಲಿ ಪೋಷಣ್ ಅಭಿಯಾನ್, ಮಿಷನ್ ಶಕ್ತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್, ಪ್ರಧಾನ ಮಂತ್ರಿ ಮಾತೃವಂದನಾ (Anganwadi Vacancy) ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಸೇರಿದಂತೆ ಇತರೆ ಯೋಜನೆಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಇದನ್ನೂ ಓದಿ: Upparahatti Murder: ರಾಜಸ್ಥಾನ ಮೂಲದ ವುಡ್ ವರ್ಕ್ ಕೆಲಸಗಾರ ಹುಕುಂ ಸಿಂಗ್ ಕೊಲೆ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್.ಎಸ್.ಕೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
