Chitradurga news|nammajana.com|27-7-2024
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲರಿಗೆ ಮನವಿ ಸಲ್ಲಿಸಿದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ
ನಮ್ಮಜನ.ಕಾಂ, ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣವೇ (Bhadra Upper Bank Project) ಬಜೆಟ್ ಘೋಷಿತ 5300 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವ ಸಿ. ಆರ್.ಪಾಟೀಲ್ ಅವರಲ್ಲಿ ಮನವಿ ಮಾಡಿದ್ದಾರೆ.
ಸಂಸತ್ ಅಧಿವೇಶನದ ನಡುವೆಯೇದೆಹಲಿಯಲ್ಲಿ ಜಲಶಕ್ತಿ ಸಚಿವರ ಭೇಟಿಯಾದ ಸಂಸದ್ವಯರು, ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗ ವರ್ಧಿತ ನೀರಾವರಿ (Bhadra Upper Bank Project) ಪ್ರಯೋಜನಾ ಯೋಜನೆಯಡಿ 5300 ಕೋಟಿ ಅನುದಾನ ಬಿಡುಗಡೆ ಮಾಡಿ, ಕರ್ನಾಟಕದ ರೈತರ ನೆರವಿಗೆ ಧಾವಿಸಬೇಕು ಎಂದು ವಿನಂತಿಸಿದ್ದಾರೆ.
5300 ಕೋಟಿ ರೂ ಅನುದಾನ ಕೂಡಲೇ ಬಿಡುಗಡೆಗೊಳಿಸಿ (Bhadra Upper Bank Project)
ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ನೀರಾವರಿಯೋಜನೆಯಾಗಿದ್ದು ಮೊದಲಹಂತದಲ್ಲಿ ಭದ್ರಾ ಮೇಲ್ದಂಡೆಗೆ ಘೋಷಿತ 5300 ಕೋಟಿ ರೂ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವ (Bhadra Upper Bank Project) ಸಿ.ಆರ್.ಪಾಟೀಲರಿಗೆ ಮನವಿ ಸಲ್ಲಿಸಿದರು.
367 ಕೆರೆಗಳಿಗೆ ನೀರು ತುಂಬಿಸುವ ಯೋಜನೆ
ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಲಿಫ್ಟ್ ಮಾಡಿ, 2ನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ನಾಲ್ಕು ಬರಪೀಡಿತ ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವುದಾಗಿದೆ. ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರಾವರಿ ಕಲ್ಪಿಸುವುದು ಹಾಗೂ 367 ಕೆರೆಗಳ (Bhadra Upper Bank Project) ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಾಗಿದೆ.
20200 2.160 21,473 ಕೋಟಿ ರು. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿ ತಾತ್ಮಕ ಒಪ್ಪಿಗೆ ನೀಡಿದ್ದು, ಜಲ ಸಂಪನ್ಮೂಲ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 2020ರ ಡಿಸೆಂಬರ್ 24 ರಂದು 16,125 ಕೋಟಿ ರು.ಗಳಿಗೆ ಸ್ಥಿರೀಕರಿಸಿದೆ. ಬಂಡವಾಳ ಒಪ್ಪಿಗೆ ಸಮಿತಿ 2021ರ ಮಾರ್ಚ್ 25 ರಂದು ಒಪ್ಪಿಗೆ (Bhadra Upper Bank Project) ನೀಡಿದೆಯಲ್ಲದೇ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಭದ್ರಾ ಮೇಲ್ದಂಡೆ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶಿಫಾರಸ್ಸು ಮಾಡಿದೆ. 2022ರ ಅ.12ರಂದು ನಡೆದ ಸಾರ್ವಜನಿಕ ಹೂಡಿಕೆ ಮಂಡಳಿ ಸಭೆಯಲ್ಲಿ ಭದ್ರಾ ಮೇಲ್ದಂಡೆಯೋಜನೆಗೆ 5300 ಕೋಟಿ ರು. ನೀಡಲು ಒಪ್ಪಿಗೆ ಸೂಚಿಸಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ ನೆರವಾಗಿ
ಕಳೆದ ವರ್ಷದ ಕೇಂದ್ರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವಾಗಿ ಘೋಷಣೆ ಮಾಡಲಾಗಿದೆ. ಬರಪೀಡಿತ ಜಿಲ್ಲೆಗಳ ರೈತರು ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ಈ (Bhadra Upper Bank Project) ಯೋಜನೆಯನ್ನು ಶೀಘ್ರ ಕಾರ್ಯಗೊತ ಗೊಳಿಸುವ ಅಗತ್ಯವಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಡಿ ಘೋಷಿಸುವ ಕೆಲಸ ನಿಧಾನವಾಗುತ್ತಿರುವ ಹಿನ್ನೆಲೆ ಹಾಗೂ ಕೇಂದ್ರದ ಅನುದಾನ ಬಿಡುಗಡೆ ಆಗದಿರುವುದರಿಂದ ಕಾಮ ಗಾರಿ ಪೂರ್ಣಗೊಳಿಸುವುದು ವಿಳಂಬವಾ ಗುತ್ತಿದೆ.
ಇದನ್ನೂ ಓದಿ: ಪಿಡಿಓ ಎನ್.ಪಾಲಯ್ಯ ಸಸ್ಪೆಂಡ್ ಗೆ ಏಳು ಮುಖ್ಯ ಕಾರಣಗಳು| PDO SASPENDED
ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗವರ್ಧಿತ ನೀರಾವರಿ (Bhadra Upper Bank Project) ಪ್ರಯೋಜನಾ ಯೋಜನೆ ಅಡಿ5300ಕೋಟಿ ಅನುದಾನ ಬಿಡಗಡೆ ಮಾಡಬೇಕು ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸು ವಂತೆ ಸಿ.ಆರ್.ಪಾಟೀಲರಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ.