Chitradurga news|nammajana.com|6-8-2024
ನಮ್ಮಜನ.ಕಾಂ, ಚಿತ್ರದುರ್ಗ: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯಾಪ್ತಿಯಲ್ಲಿನ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ (upper bhadra project) ಭದ್ರಾ ಜಲಾಶಯದಿಂದ ಜು. 31 ರಿಂದ ನೀರು ಹರಿಸಲಾಗುತ್ತಿದೆ.
ಸದರಿ ಕಾಲುವೆಯು ಭದ್ರಾ ಜಲಾಶದಿಂದ (bhadra dam) ಪ್ರಾರಂಭವಾಗಿ ಚಿಕ್ಕಮಗಳೂರು (chikkamagaluru) ಜಿಲ್ಲೆಯ ತರೀಕೆರೆ (tarikere) ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ (ajjampura) ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ.

ಇದನ್ನೂ ಓದಿ: Vani Vilasa Sagara: ವೇದಾವತಿ ನದಿಯ ಒಡಲು ಸೇರಿದ ಭದ್ರೆ | ಕೋಟೆನಾಡಿನ ಜನರ ಮೊಗದಲ್ಲಿ ಮೂಡಿದ ಹರ್ಷ
ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೆಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ (vedavathi river) ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ (vani vilasa sagara dam) ನೀರನ್ನು ಹರಿಸಲಾಗಿದ್ದು ಈಗ ವಾಣಿ ವಿಲಾಸ ಸಾಗರ ತಲುಪಿದ್ದು ಜನರಲ್ಲಿ ಹಬ್ಬದ ವಾತವರಣ ಮನೆ ಮಾಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252