Chitradurga news|nammajana.com|3-8-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಪರಸ್ಪರ ಜಗಳವಾಡಿ, ಅವಾಚ್ಯ ಶಬ್ದಗಳಿಂದ (CHALLAKERE DYSP) ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೈರಾಡ ಕಾಲೋನಿ ನಿವಾಸಿ ಮನು (38) ಹಾಗೂ ದಾವಣಗೆರೆ ಜಿಲ್ಲೆ ಮಲ್ಲಾಪುರ ಗ್ರಾಮದ ವಾಸಿ ದೇವರಾಜ(42) ಇಬ್ಬರು ಶಶಿ ಗಾರ್ಮೆಂಟ್ಸ್ ನಲ್ಲಿ ಕೆಲಸಮಾಡುತ್ತಿದ್ದು, ಕ್ಷುಲ್ಲಕ ಕಾರಣಕ್ಕಾಗಿ (CHALLAKERE DYSP) ಡಿವೈಎಸ್ಪಿ ಕಚೇರಿ ಆವರಣದಲ್ಲೇ ಪರಸ್ಪರ ನಿಂದಿಸುತ್ತಾ ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ಗಾಯಗೊಂಡ ಮನು ಠಾಣೆಯಲ್ಲಿ ಈ ದೂರು ನೀಡಿದ್ದು, ಪಿಎಸ್‌ಐ ಜೆ.ಶಿವರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: PDO SASPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್
ಮತ್ತೊಂದು ಪ್ರಕರಣದಲ್ಲಿ ರತ್ನಗಿರಿ ಗ್ರಾಮದ ಗೊಣಗಜ್ಜ ಚಿಲ್ಲರೆ ಅಂಗಡಿ ಬಳಿ ಅಶೋಕ (22) ಎಂಬ ವ್ಯಕ್ತಿಯ ಮೇಲೆ ಕಾಟಯ್ಯ (CHALLAKERE DYSP) ಸೇರಿದಂತೆ ಒಟ್ಟು ಮೂವರು ಹಲ್ಲೆ ನಡೆಸಿದ್ದು, ಗಾಯಗೊಂಡ ಅಶೋಕ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಠಾಣಾಧಿಕಾರಿ ಶ್ರೀನಿವಾಸ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252